

ಕುಂದಾಪುರದ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಂದ ಪರಿಸರ ಸಂರಕ್ಷಣೆಯ ಪ್ರತಿಜ್ಞಾ ವಿಧಿಯನ್ನು ತೆಗೆದುಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ| ಅಬ್ದುಲ್ ಕರೀಮ್ ಅವರು ಮಾತನಾಡಿ ಉತ್ತಮವಾದ ಆರೋಗ್ಯಕ್ಕೆ ಪರಿಸರ ಸಂರಕ್ಷಣೆ ಅತ್ಯಗತ್ಯ ಎಂದು ಹೇಳುತ್ತ ಅದರ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಿ ಹೇಳಿದರು. ತದನಂತರ ಸಾಂಕೇತಿಕವಾಗಿ ಗಿಡ ನೆಡುವುದರ ಮೂಲಕ ವನಮಹೋತ್ಸ ಆಚರಣೆಗೆ ಚಾಲೆನೆ ನೀಡಲಾಯಿತು. 2000ಕ್ಕೂ ಹೆಚ್ಚು ಗಿಡಗಳನ್ನು ವಿದ್ಯಾರ್ಥಿಗಳು ಕಾಲೇಜಿನ ಆವರಣದಲ್ಲಿ ನೆಟ್ಟು ನಮ್ಮ ಎಮ್ ಐ ಟಿ ಕೆ ಹಸಿರು ಎಮ್ ಐ ಟಿ ಕೆ ಎಂಬ ಘೋಷಣೆ ಮಾಡಿದರು. ಕಾರ್ಯಕ್ರಮದಲ್ಲಿ ಉಪಪ್ರಾಂಶುಪಾಲರಾದ ಪ್ರೊ. ಮೆಲ್ವಿನ್ ಡಿ ಸೋಜಾ, ರಾಷ್ಟ್ರೀಯ ಸೇವಾ ಯೋಜನಾ ಕೋಶದ ಸಂಯೋಜಕರಾದ ಪ್ರೊಫೆಸರ್ ಬಾಲನಾಗೇಶ್ವರ್ ಎಸ್, ಯೂತ್ ರೆಡ್ ಕ್ರಾಸ್ ಘಟಕದ ಸಂಯೋಜಕರಾದ ಪ್ರೊಫೆಸರ್ ವರುಣ್ ಕುಮಾರ್, ಕುಂದಾಪುರದ ಸಾಮಾಜಿಕ ಅರಣ್ಯ ಸಿಬ್ಬಂದಿ , ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಪ್ರಾಧ್ಯಾಪಕಿ ಸುಷ್ಮ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ವಿದ್ಯಾರ್ಥಿ ವಿಘ್ನೇಶ್ ಪ್ರತಿಜ್ಞಾ ವಿಧಿ ಬೋಧಿಸಿದರು.

