

ಮೂಡ್ಲಕಟ್ಟೆ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿನಲ್ಲಿ 15ನೇ ಪದವಿ ಪ್ರಧಾನ ಸಮಾರಂಭವು ನಡೆಯಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಮಣಿಪಾಲದಲ್ಲಿರುವ ಭಾರತದ ಪ್ರಸಿದ್ಧ ಕಾರ್ಮಿಕ್ ಡಿಸೈನ್ ಪ್ರೈವೇಟ್ ಲಿಮಿಟೆಡ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿರುವ ಶ್ರೀ ರತ್ನಾಕರ್ ಭಟ್ರವರು ಆಗಮಿಸಿದ್ದರು. ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದ ಅವರು ಯಾವುದೇ ಕಾರ್ಯದಲ್ಲಿ ನಾವು ಯಶಸ್ಸು ಸಾಧಿಸಬೇಕಾದರೆ ಪರಿಶ್ರಮ, ತಾಳ್ಮೆ ಹಾಗೂ ಪ್ರಕ್ರಿಯೆಯು ಬಹಳ ಮುಖ್ಯವಾಗಿರುತ್ತದೆ ಎಂದರು. ಚೈನಾ ಬಿದಿರು ಹೇಗೆ ಸಮಯ ತೆಗೆದುಕೊಂಡು ಬೇರು ಸದೃಡಮಾಡಿ ನಂತರ ಒಮ್ಮೆಲೇ ಬೆಳೆಯುವಂತೆ, ನಮ್ಮ ತಯಾರಿ ಇದ್ದರೆ ಯಾರು ನಮ್ಮ ಯಶಸ್ಸನ್ನು ತಡೆಯಲು ಸಾಧ್ಯವಿಲ್ಲ ಎಂದು ಹೇಳಿದರು. ಕಾಲೇಜಿನ ಪ್ರಾಶುಂಪಾಲರಾದ ಡಾ. ಅಬ್ದುಲ್ ಕರೀಂರವರು ಮಾತನಾಡುತ್ತಾ, ನಮ್ಮ ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಬಗ್ಗೆ ಉದ್ಯೋಗದಾತರು ಕೊಟ್ಟಿರುವ ಪ್ರತಿಕ್ರಿಯೆ ಅತ್ಯುತ್ತಮವಾಗಿದ್ದು ಅದನ್ನು ಎಲ್ಲಾ ಪದವಿಧರರು ಮುಂದುವರಿಸಿಕೊಂಡು ಹೋಗುವಂತೆ ಸಲಹೆ ನೀಡಿ ಪ್ರೋತ್ಸಾಹಿಸಿದರು. ಬಂದಿದ್ದ ಎಲ್ಲಾ ಪದವಿಧರ ವಿದ್ಯಾರ್ಥಿಗಳು ಅತ್ಯಂತ ಸಂತೋಷದಿಂದ ಗಣ್ಯರಿಂದ ಪದವಿ ಪ್ರಮಾಣಪತ್ರವನ್ನು ಸ್ವೀಕರಿಸಿದರು. ಕಾಲೇಜಿನ ಉಪಪ್ರಾಂಶುಪಾಲರಾದ ಪ್ರೊ. ಮೆಲ್ವಿನ್ ಡಿಸೋಜರವರು ಪದವಿಧರರಿಗೆ ಪ್ರತಿಜ್ನಾವಿಧಿ ಭೋಧಿಸಿದರು. ಎಲ್ಲಾ ಪದವಿಧರ ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣ ಪತ್ರವನ್ನು ವಿತರಿಸಲಾಯಿತು. ಈ ಪದವಿ ಪ್ರಮಾಣ ಸಮಾರಂಭದಲ್ಲಿ ಐಎಂಜೆ ವಿದ್ಯಾ ಸಂಸ್ಥೆಗಳ ನಿರ್ದೇಶಕರಾದ ಪ್ರೋ. ದೋಮ ಚಂದ್ರಶೇಖರ್, ಬ್ರಾಂಡ್ ಬಿಲ್ಡಿಂಗ್ ನಿರ್ದೇಶಕರಾದ ಡಾ. ರಾಮಕೃಷ್ಣ ಹೆಗಡೆಯವರು, ಎಲ್ಲಾ ವಿಭಾಗ ಮುಖ್ಯಸ್ಥರು, ಶಿಕ್ಷಕವೃಂದದವರು ಮತ್ತು ಪದವಿ ಪಡೆದ ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ದರು. ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಈ ಕಾರ್ಯಕ್ರದಲ್ಲಿ ಪ್ರೊ. ತಿಲಕಲಕ್ಷ್ಮೀಯವರು ಅತಿಥಿಗಳನ್ನು ಸ್ವಾಗತಿಸಿದರು ಮತ್ತು ಧನ್ಯವಾದ ಸಮರ್ಪಣೆಗೈದರು. ಡೀನ್ ಟಿಪಿಐಆರ್ ಪ್ರೊ.ಅಮೃತಮಾಲಾರವರು ಕಾರ್ಯಕ್ರಮ ನಿರೂಪಿಸಿದರು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.


