


ಜನಸ್ಪಂದನ ನ್ಯೂಸ್, ದಾವಣಗೆರೆ : ದಾವಣಗೆರೆ ಜಿಲ್ಲೆಯ ಚನ್ನಗಿರಿ ಸಮೀಪ ಟಿಪ್ಪರ್ ಲಾರಿಯೊಂದು ಓವರ್ ಟೇಕ್ ಮಾಡಲು ಹೋಗಿ ಚಲಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಅತ್ತೆ ಮತ್ತು ಸೊಸೆ ಇಬ್ಬರು ಮೃತಪಟ್ಟ ಘಟನೆ ನಡೆದಿದೆ. ಕಾರಿನಲ್ಲಿ ನಾಲ್ವರು ಪ್ರಯಾಣಿಸುತಿದ್ದರು. ಮೃತಪಟ್ಟವರು ಬಾಳ್ಳು ಪೇಟೆಯ ಕಾಫಿ ಪ್ಲಾಂಟರ್ ಮತ್ತು ಸಹ್ಯಾದ್ರಿ ಥಿಯೇಟರ್ ಮಾಲಕರಾಗಿದ್ದ ಮೈತ್ರಿದೇವಿ (70) (ಬಿ.ಎಸ್. ಗುರುನಾಥ್ ಅವರ ಪತ್ನಿ) ಹಾಗೂ ಸೊಸೆ ಸೌಜನ್ಯ (48) ಎಂದು ತಿಳಿದುಬಂದಿದೆ.
ಬಿ.ಎಸ್. ಗುರುನಾಥ್ ಅವರ ಮಗಳ ಹೊಸ ಮನೆ ಗೃಹ ಪ್ರವೇಶಕ್ಕೆಂದು ಕಾರಿನಲ್ಲಿ ಹಾಸನದಿಂದ ದಾವಣಗೆರೆಗೆ ಹೋಗಿದ್ದರು ಎನ್ನಲಾಗಿದೆ. ಕಾರ್ಯಕ್ರಮ ಮುಗಿಸಿಕೊಂಡು ಹಾಸನಕ್ಕೆ ವಾಪಸ್ಸು ಬರುವಾಗ ಚನ್ನಗಿರಿ ಬಳಿ ಟಿಪ್ಪರ್‌ಲಾರಿ ವಾಹನದ ಚಾಲಕ ಅತಿ ವೇಗದಲ್ಲಿ ಓವರ್ ಟೇಕ್ ಮಾಡುವ ಅವಸರದಲ್ಲಿ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ಪಲ್ಟಿಯಾಗಿದೆ
ಈ ವೇಳೆ ಕಾರಿನಲ್ಲಿ ಮುಂಭಾಗ ಕುಳಿತಿದ್ದ ಬಿ.ಎಸ್. ಗುರುನಾಥ್ ಹಾಗೂ ಪುತ್ರ ರಾಜೇಶ್ ಇಬ್ಬರೂ ಸೇಫ್ಟಿ ಬೆಲ್ಟ್ ಹಾಕಿಕೊಂಡಿದ್ದರಿಂದ ಇಬ್ಬರಿಗೂ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಹಿಂದಿನ ಸೀಟಿನಲ್ಲಿ ಕುಳಿತಿದ್ದದು.