![](https://jananudi.com/wp-content/uploads/2022/10/1-1-shabbir-5.jpg)
![](https://jananudi.com/wp-content/uploads/2022/10/11svpur.jpg)
ಶ್ರೀನಿವಾಸಪುರ: ವಾಹನ ಚಾಲಕರು ಸುಗಮ ಸಂಚಾರಕ್ಕೆ ಸಹಕರಿಸಬೇಕು, ನಿಗದಿಪಡಿಸಲಾದ ಸ್ಥಳದಲ್ಲಿ ಮಾತ್ರ ವಾನಹ ನಿಲುಗಡೆ ಮಾಡಬೇಕು ಎಂದು ಸರ್ಕಲ್ ಪೊಲೀಸ್ ಇನ್ಸ್‍ಪೆಕ್ಟರ್ ಜೆ.ಸಿ.ನಾರಾಯಣಸ್ವಾಮಿ ಮನವಿ ಮಾಡಿದರು.
ಕಾನೂನು ಬಾಹಿರವಾಗಿ ವಾಹನ ಚಾಲನೆ ಮಾಡುವುದರಿಂದ ಹಾಗೂ ಸಂಚಾರ ನಿಯಮ ಪಾಲನೆ ಮಾಡದಿರುವುದರಿಂದ ಸುಗಮ ಸಂಚಾರ ಸಾಧ್ಯವಾಗುತ್ತಿಲ್ಲ. ಎಚ್ಚರ ತಪ್ಪಿದರೆ ವಾಹನ ಅಪಘಾತದ ಸಾಧ್ಯತೆ ಇರುವುದರಿಂದ ಅಗತ್ಯ ಇರುವ ಸ್ಥಳಗಳಲ್ಲಿ ಪೊಲೀಸ್ ಇಲಾಖೆ ವತಿಯಿಂದ ಬ್ಯಾರಾಕೇಡ್ ಅಳವಡಿಸಲಾಗುತ್ತಿದೆ ಎಂದು ಹೇಳಿದರು.
ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದ ಪಕ್ಕದಲ್ಲಿನ ರಸ್ತೆಯಲ್ಲಿ ಅಡ್ಡದಿಡ್ಡಿ ವಾಹನ ಚಾಲನೆ ಮಾಡುವುದರಿಂದ ಹಾಗೂ ಎಲ್ಲೆಂದರಲ್ಲಿ ವಾಹನ ನಿಲುಗಡೆ ಮಾಡುವುದದರಿಂದ ಟ್ಯಾಫಿಕ್ ಜಾಮ್ ಉಂಟಾಗುತ್ತಿತ್ತು. ಅದನ್ನು ತಡೆಯಲು ಪೂರಕವಾಗಿ ನೂತನ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದೆ ಎಂದು ಹೇಳಿದರು.
ಪುರಸಭೆ ಮುಖ್ಯಾಧಿಕಾರಿ ಎಂ.ಜಯರಾಂ, ಸದಸ್ಯರಾದ ರಾಮಾಂಜಿ, ಮುಖಂಡ ಪೂಲ ಶಿವಾರೆಡ್ಡಿ ಇದ್ದರು.