ಕಾರ್ಕಳ ಬ್ಲಾಕ್ ಮಹಿಳಾ ಕಾಂಗ್ರೆಸ್ ನ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ಅನಿತಾ ಡಿ’ಸೋಜ

ವರದಿ :  ವಾಲ್ಟರ್ ಮೊಂತೇರೊ, ಬೆಳ್ಮಣ್ಣು

ಕಾರ್ಕಳ ಬ್ಲಾಕ್ ಮಹಿಳಾ ಕಾಂಗ್ರೆಸ್ ನ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ಅನಿತಾ ಡಿ’ಸೋಜ ಬೆಳ್ಮಣ್ ಅವರಿಗೆ ಉಡುಪಿಯ ಕಾಂಗ್ರೆಸ್ ಭವನದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ನೇಮಕಾತಿ ಆದೇಶ ಪತ್ರವನ್ನು ನೀಡಲಾಯಿತು.ಕೆಪಿಸಿಸಿ ಪ್ಯಾನಲಿಸ್ಟ್ ಶ್ರೀಮತಿ ವೆರೋನಿಕಾ ಕರ್ನೇಲಿಯೋ ಅವರು ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ನ ಅಧ್ಯಕ್ಷೆ ಶ್ರೀಮತಿ ಗೀತಾ ವಾಗ್ಳೆ ಅವರು ನೀಡಿರುವ ಆದೇಶ ಪತ್ರವನ್ನು ಅನಿತಾ ಡಿ’ಸೋಜ ಅವರಿಗೆ ಹಸ್ತಾಂತರಿಸಿ ಶುಭ ಕೋರಿದರು.ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶ್ರೀ ಅಶೋಕ್ ಕುಮಾರ್ ಕೊಡವೂರು, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಗೀತಾ ವಾಗ್ಳೆ, ಉಪಾಧ್ಯಕ್ಷೆ ಶ್ರೀಮತಿ ಜ್ಯೋತಿ ಹೆಬ್ಬಾರ್,ಕೋಟ ಬ್ಲಾಕ್ ಅಧ್ಯಕ್ಷೆ ಶ್ರೀಮತಿ ಮಮತಾ ಶೆಟ್ಟಿ,ಕಾಪು ಬ್ಲಾಕ್ ಅಧ್ಯಕ್ಷೆ ಶ್ರೀಮತಿ ಪ್ರಭಾ ಶೆಟ್ಟಿ, ಹೆಬ್ರಿ ಬ್ಲಾಕ್ ಅಧ್ಯಕ್ಷೆ ಶ್ರೀಮತಿ ರಂಜನಿ ಹೆಬ್ಬಾರ್, ನಗರಸಭೆಯ ಮಾಜಿ ಅಧ್ಯಕ್ಷೆ ಶ್ರೀಮತಿ ಮೀನಾಕ್ಷಿ ಮಾಧವ, ನಾಗೇಶ್ ಕುಮಾರ್ ಉದ್ಯಾವರ,ಹರೀಶ್ ಕಿಣಿ, ಯತೀಶ್ ಕರ್ಕೇರ, ಕೀರ್ತಿ ಶೆಟ್ಟಿ,ಜಿತೇಶ್,ಹಾಮದ್,, ಸುಗುಣಾ ಪೂಜಾರ್ತಿ ಮುಂತಾದವರು ಉಪಸ್ಥಿತರಿದ್ದರು