

ಕುಂದಾಪುರ; ಐಎಂಜೆ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಹಾಗೂ ಮೂಡಲಕಟ್ಟೆ ಕಾಲೇಜ್ ಆಫ್ ಫಿಸಿಯೋಥೆರಪಿ, ಮೂಡಲಕಟ್ಟೆ, ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ–2026 ಹಾಗೂ 10 ದಿನಗಳ ಯೋಗ ಶಿಬಿರಕ್ಕೆ ಬುಧವಾರ ಅತ್ಯಂತ ಉತ್ಸಾಹಭರಿತವಾಗಿ ಚಾಲನೆ ನೀಡಲಾಯಿತು.
ಕಾರ್ಯಕ್ರಮವನ್ನು ಗಣ್ಯರು ಸಾಂಪ್ರದಾಯಿಕವಾಗಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಮುನಿಯಲ್ ಕಾಲೇಜ್ ಆಫ್ ಯೋಗ ಅಂಡ್ ನ್ಯಾಚುರೋಪತಿಯ ಉಪ ಪ್ರಾಂಶುಪಾಲರಾದ ಡಾ. ಸಾತಪ್ಪ ಹೂವಿನಹಳ್ಳಿ ಅವರು ಮಾತನಾಡಿ, ಯೋಗವು ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ವೃದ್ಧಿಸುವ ಅತ್ಯುತ್ತಮ ಸಾಧನವಾಗಿದ್ದು, ಪ್ರತಿಯೊಬ್ಬರೂ ತಮ್ಮ ದೈನಂದಿನ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಮೂಡಲಕಟ್ಟೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಪ್ರಾಂಶುಪಾಲರಾದ ಡಾ. ರಾಮಕೃಷ್ಣ ಹೆಗ್ಡೆ ಅವರು ಮಾತನಾಡಿ, ಯೋಗವು ಕೇವಲ ವ್ಯಾಯಾಮವಲ್ಲ, ಅದು ಸಮಗ್ರ ಜೀವನಶೈಲಿಯಾಗಿದ್ದು ವಿದ್ಯಾರ್ಥಿಗಳಲ್ಲಿ ಏಕಾಗ್ರತೆ, ಆತ್ಮವಿಶ್ವಾಸ ಮತ್ತು ಆರೋಗ್ಯಕರ ಮನೋಭಾವವನ್ನು ಬೆಳೆಸುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮೂಡಲಕಟ್ಟೆ ಶಿಕ್ಷಣ ಸಂಸ್ಥೆಗಳ ಡೀನ್ ಡಾ. ಪದ್ಮಚರಣ ಸ್ವೈನ್,ಮೂಡಲಕಟ್ಟೆ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಜೆನ್ನಿಫರ್ ಫ್ರೀಡಾ ಮೆನೆಜಸ್ ಉಪಸ್ಥಿತರಿದ್ದರು. ಐಎಂಜೆ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಹಾಗೂ ಮೂಡಲಕಟ್ಟೆ ಇನ್ಸ್ಟಿಟ್ಯೂಟ್ ಆಫ್ ಪ್ಯಾರಾಮೆಡಿಕಲ್ ಸೈನ್ಸಸ್ನ ಪ್ರಾಂಶುಪಾಲರಾದ ಪ್ರೊ. ಹೇಮಲತಾ, ಐಎಂಜೆ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ನ ಉಪ ಪ್ರಾಂಶುಪಾಲರಾದ ಸೌಜನ್ಯ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಶಿಕ್ಷಣ ಸಂಸ್ಥೆಗಳ ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.

