JANANUDI.COM NETWORK

ಕುಂದಾಪುರ: ಮುನಾಫ್ ಕೋಡಿ ಇವರನ್ನು ವಿಧಾನ ಪರಿಷತ್ ಮಾಜಿ ಸಭಾಪತಿ, ಸದಸ್ಯ ಕೆ. ಪ್ರತಾಪಚಂದ್ರ ಶೆಟ್ಟಿಯವರ ಸೂಚನೆ ಮೇರೆಗೆ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ ಶೆಟ್ಟಿಯವರ ಶಿಫಾರಸ್ಸಿನ ಮೇರೆಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ ಕುಮಾರ ಕೊಡವೂರರವರ ಅನುಮೋದನೆಯೊಂದಿಗೆ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರನ್ನಾಗಿ ನೇಮಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಇಸ್ಮಾಯಿಲ್ ಆತ್ರಾಡಿ ಆದೇಶಿಸಿರುತ್ತಾರೆ.
ಮುನಾಫ್ ಕೋಡಿಯವರು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ಕಾರ್ಯಕಾರಿ ಸದಸ್ಯರಾಗಿದ್ದು, ಯುವ ಕಾಂಗ್ರೆಸ್ ಮತ್ತು ಕಾಂಗ್ರೆಸ್ ಸಾಮಾಜಿಕ ಜಾಲತಾಣದಲ್ಲಿ ಸಕ್ರೀಯರಾಗಿ ಕಾರ್ಯ ನಿರ್ವಹಿಸಿದ್ದರು.