ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ
ಶ್ರೀನಿವಾಸಪುರ: ಪಟ್ಟಣದ ಅಂಗಡಿಗಳ ಮೇಲೆ ಪುರಸಭೆ ಅಧಿಕಾರಿಗಳು ದಾಳಿ ನಡೆಸಿ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಸೋಮವಾರ ಬೆಳಿಗ್ಗೆ ಪುರಸಭೆ ಅಧಿಕಾರಿಗಳು ತಮ್ಮ ಸಿಬ್ಬಂದಿಯೊಂದಿಗೆ ಅನಿರೀಕ್ಷಿತ ದಾಳಿ ನಡೆಸಿ ಎಂಜಿ ರಸ್ತೆ ಸೇರಿದಂತೆ ಸೇರಿದಂತೆ ಪಟ್ಟಣದ ಹಲವು ಅಂಗಡಿಗಳನ್ನು ಜಾಲಾಡಿ ಕಾನೂನು ಬಾಹಿರ ಗಾತ್ರದ ಪ್ಲಾಸ್ಟಿಕ್ ಕವರ್, ಮಾರಾಟಕ್ಕೆ ಇಟ್ಟಿದ್ದ ಪ್ಲಾಸ್ಟಿಕ್ ಲೋಟ, ಚಮಚ, ಚಿತ್ರಪಟಗಳು ಸೇರಿದಂತೆ ಹಲವು ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿಕೊಂಡು ರೂ.5 ಸಾವಿರ ದಂಡ ವಿಧಿಸಿದರು.
ಪುರಸಭೆ ಮುಖ್ಯಾಧಿಕಾರಿ ಡಿ.ಶೇಖರರೆಡ್ಡಿ, ಪುರಸಭೆಯ ಆರೋಗ್ಯ ನಿರೀಕ್ಷಕ ಎಂ.ಪೃಥ್ವಿರಾಜ್ ಪುರಸಭೆ ಕಂದಾಯ ನಿರೀಕ್ಷಕ ಶಂಕರ್ ಹಾಗೂ ಸಿಬ್ಬಂದಿ ದಾಳಿಯಲ್ಲಿ ಭಾಗವಹಿಸಿದ್ದರು.