ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ: ಪಟ್ಟಣದ ಇಂದಿರಾ ಕ್ಯಾಂಟೀನ್ಗೆ ಶನಿವಾರ ಪುರಸಭೆಯ ಅಧಿಕಾರಿಗಳು ಭೇಟಿ ನೀಡಿ ಆಹಾರದ ಗುಣಮಟ್ಟ ಪರಿಶೀಲಿಸಿದರು.
ಲಾಕ್ ಡೌನ್ ಸಂದರ್ಭದಲ್ಲಿ ಆಹಾರದ ಅಗತ್ಯ ಇರುವ ವ್ಯಕ್ತಿಗಳಿಗೆ ಉಚಿತವಾಗಿ ಊಟದ ವ್ಯವಸ್ಥೆ ಮಾಡಲಾಗಿದೆ. ಹಸಿದವರು ಇಂದಿರಾ ಕ್ಯಾಂಟೀನ್ ಕಡೆ ನೋಡುವಂತಾಗಿದೆ. ಅದ್ದರಿಂದ ಕ್ಯಾಂಟೀನ್ ಸಿಬ್ಬಂದಿ ಆಹಾರ ತಯಾರಿಸುವಾಗ ಸ್ವಚ್ಛತೆ ಹಾಗೂ ಗುಣಮಟ್ಟಕ್ಕೆ ಆದ್ಯತೆ ನೀಡಬೇಕು ಎಂದು ಪುರಸಬೆಯ ಸಮುದಾಯ ಸಂಘಟನಾಧಿಕಾರಿ ಕೆ.ಎನ್.ರಾಜೇಸ್ವರಿ ಹೇಳಿದರು.
ಪುರಸಭೆ ಮುಖ್ಯಾಧಿಕಾರಿ ಡಿ.ಶೇಖರರೆಡ್ಡಿ, ಆರೋಗ್ಯ ನಿರೀಕ್ಷಕ ಎಂ.ಪೃಥ್ವಿರಾಜ್, ಕಂದಾಯ ನಿರೀಕ್ಷಕ ಎನ್.ಶಂಕರ್, ಎಸ್.ಪ್ರತಾಪ್, ವೆಂಕಟೇಶಯ್ಯ ಇದ್ದರು.
