ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ
ಶ್ರೀನಿವಾಸಪುರ: ಶಿಕ್ಷಕರು ಮಕ್ಕಳಲ್ಲಿ ಪರಿಸರ ಪ್ರಜ್ಞೆ ಉಂಟುಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಉಮಾದೇವಿ ಹೇಳಿದರು.
ತಾಲ್ಲೂಕಿನ ಬದ್ದಿಪಲ್ಲಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಗುರುವಾರ ಭೇಟಿ ನೀಡಿ, ಶಾಲೆಯ ಆವರಣದಲ್ಲಿ ಬೆಳೆಸಲಾಗಿರುವ ಗಿಡಗಳನ್ನು ನೋಡಿದ ಬಳಿಕ ಮಾತನಾಡಿ, ¨ದ್ದಿಪಲ್ಲಿ ಶಾಲೆ ಪರಿಸರ ಶಾಲೆಗೆ ಉತ್ತಮ ನಿದರ್ಶನವಾಗಿದೆ. ಇದು ಏಕೋಪಾಧ್ಯಾಯ ಶಾಲೆಯಾಗಿದ್ದರೂ, ಶಿಕ್ಷಕರ ಹಾಗೂ ಮಕ್ಕಳ ಪರಿಸರ ಕಾಳಜಿಯಿಂದ ಹಸಿರು ಶಾಲೆಯಾಗಿ ಮಾರ್ಪಟ್ಟಿದೆ ಎಂದು ಹೇಳಿದರು.
ಶಾಲೆಗೆ ಅಗತ್ಯವಾದ ಮೂಲ ಸೌಕರ್ಯ ಕಲ್ಪಿಸಲಾಗುವುದು. ತಾಲ್ಲೂಕಿನ ಎಲ್ಲ ಶಾಲೆಗಳಲ್ಲೂ ಮೂಲ ಸೌಕರ್ಯ ಕಲ್ಪಿಸಲು ಮೊದಲ ಆದ್ಯತೆ ನೀಡಲಾಗಿದೆ. ಶಾಲಾ ಮುಖ್ಯಸ್ಥರು ಈ ಕುರಿತು ಹೆಚ್ಚಿನ ನಿಗಾ ವಹಿಸಬೇಕು. ಮಕ್ಕಳು ಮೂಲ ಸೌಲಭ್ಯದಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.
ಇಸಿಒ ಲಕ್ಷ್ಮೀನಾರಾಯಣ, ಸಿಆರ್‍ಪಿ ಕೆ.ವೇಣುಗೋಪಾಲ್, ಶಿಕ್ಷಕಿ ಎನ್.ಮಂಜುಳ ಇದ್ದರು.