ಚಾಮರಾಜನಗರ ಆಕ್ಸಿಜನ್ ದುರಂತದಲ್ಲಿ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಯ ತಪ್ಪಿಲ್ಲ

JANANUDI.COM NETWORK


ಬೆಂಗಳೂರು:ಮೆ.13; ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಗೆ ಕ್ಲೀನ್ ಚೀಟ್ ಸಿಕ್ಕಿದೆ
ಆಕ್ಸಿಜನ್ ದುರಂತದ ೨೪ ಜನರ ಸಾವಿನ ಪ್ರಕರಣಕ್ಕೆ ಸಂಬಂದಿಸಿದ್ದಂತೆ ತನಿಖೆ ನಡೆಸಲು ಹೈಕೋರ್ಟ್ ಸದಸ್ಯರ ಸಮಿತಿ ನೇಮಿಸಿತ್ತು. ಚಾಮರಾಜ ನಗರಕ್ಕೆ ಆಮ್ಲಜನಕ ಸಾಗಿಸಲು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ತಡೆ ಒಡ್ಡಿದ್ದಾರೆಂದು ಎಂಬ ಆರೋಪ ಹೊರಿಸಿತ್ತು.
ಪ್ರಕರಣ ಸಂಬಂಧ ಪಟ್ಟಂತ್ತೆ ಇದೀಗ ತನಿಖಾ ಸಮಿತಿ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಆ ವರದಿಯಲ್ಲಿ ರೋಹಿಣಿ ಸಿಂಧೂರಿ ಆಮ್ಲಜನಕ ಪೂರೈಕೆಗೆ ತಡೆಯೊಡಿದ್ದಾರೆ ಎಂಬುದಕ್ಲೆ ಯಾವುದೇ ಸಾಕ್ಷ್ಯಾಧಾರ ಇಲ್ಲವೆಂದು ವರದಿಯಲ್ಲಿ ತಿಳಿಸಿದೆ
ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಆರೋಪ ಸಾಬೀತುಪಡಿಸುವ ಯಾವುದೇ ದಾಖಲೆಗಳಿಲ್ಲ. ಚಾಮರಾಜನಗರ ಜಿಲ್ಲೆ ಸೇರಿ ಯಾವುದೇ ಜಿಲ್ಲೆಗೆ ಆಮ್ಲಜನಕ ಪೂರೈಸಲು ರೋಹಿಣಿ ಸಿಂಧೂರಿ ತಡೆದಿದ್ದಾರೆ ಎಂದು ಹೇಳಿದ್ದಕ್ಕೆ ಆಧಾರವಿಲ್ಲ’ ಎಂದು ಸಮಿತಿ ತಿಳಿಸಿದೆ.