ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ಬೀರೊಟ್ಟು ದಿನೇಶ್ ಪೂಜಾರಿ ಅವರಿಗೆ ಸನ್ಮಾನ

ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ನೇತೃತ್ವದಲ್ಲಿ ಆದಿತ್ಯವಾರ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‍ನ ರಂಗಮಂದಿರದಲ್ಲಿ ಜರಗಿದ “ಸಮಾಗಮ” ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಪೂರ್ವಾಧ್ಯಕ್ಷರಾದ ಬೀರೊಟ್ಟು ದಿನೇಶ್ ಪೂಜಾರಿ ಅವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಅಧ್ಯಕ್ಷರಾದ ಪ್ರಶಾಂತ್ ಪೂಜಾರಿ ವಹಿಸಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಸಂಚಾಲಕ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಪೂರ್ವಾಧ್ಯಕ್ಷರಾದ ಆನಂದ ಪೂಜಾರಿ, ರಾಜೇಶ್ ಕೋಟ್ಯಾನ್, ಉಪಾಧ್ಯಕ್ಷ ಸುರೇಶ್ ಅಬ್ಬನಡ್ಕ, ಕೋಶಾಧಿಕಾರಿ ವೀಣಾ ಪೂಜಾರಿ, ಮಹಿಳಾ ಸಂಘಟನಾ ಕಾರ್ಯದರ್ಶಿ ಸಂಧ್ಯಾ ಶೆಟ್ಟಿ, ಭಜನಾ ಮಂಡಳಿಯ ಅಧ್ಯಕ್ಷೆ ಸುಲೋಚನಾ ಕೋಟ್ಯಾನ್, ಕಾರ್ಯದರ್ಶಿ ಹರಿಣಾಕ್ಷಿ ಪೂಜಾರಿ, ಅಬ್ಬನಡ್ಕ ಶ್ರೀ ವನದುರ್ಗಾ ಸ್ವ-ಸಹಾಯ ಸಂಘದ ಅಧ್ಯಕ್ಷೆ ಲಲಿತಾ ಆಚಾರ್ಯ, ಸದಸ್ಯರಾದ ಮಂಜುನಾಥ ಆಚಾರ್ಯ, ಬಾಲಕೃಷ್ಣ ಮಡಿವಾಳ, ಹರೀಶ್ ಪೂಜಾರಿ, ಲೀಲಾ ಪೂಜಾರಿ, ಆರತಿ ಕುಮಾರಿ, ಹರಿಣಿ ಪೂಜಾರಿ, ಅಶ್ವಿನಿ ಪ್ರಭಾಕರ್, ಅಶ್ವಿನಿ ಪ್ರಶಾಂತ್, ಕೀರ್ತನ್ ಕುಮಾರ್, ಕಿರಣ್ ಶೆಟ್ಟಿ, ಪ್ರಶಾಂತ್ ಬೋಳ ಮೊದಲಾದವರಿದ್ದರು.
ಸಂಘದ ಕಾರ್ಯದರ್ಶಿ ಸುರೇಶ್ ಕಾಸ್ರಬೈಲು ಕಾರ್ಯಕ್ರಮ ನಿರೂಪಿಸಿದರು. ಜೊತೆಕಾರ್ಯದರ್ಶಿ ಪುಷ್ಪ ಕುಲಾಲ್ ವಂದಿಸಿದರು.