ನಂದಳಿಕೆ: ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್:ರಜತ ಮಹೋತ್ಸವ ಸಭಾಂಗಣ ಉದ್ಘಾಟನೆ ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ನ ರಜತ ವರ್ಷದ ಸವಿ ನೆನಪಿಗಾಗಿ “ರಜತ ಮಹೋತ್ಸವ ಸಭಾಂಗಣ” ಉದ್ಘಾಟನೆಗೊಂಡಿತು. ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ನ ಅಧ್ಯಕ್ಷರಾದ ಬೀರೊಟ್ಟು ದಿನೇಶ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ನ ಸ್ಥಾಪಕಾಧ್ಯಕ್ಷರು ಹಾಗೂ ರಜತ ಮಹೋತ್ಸವ ಸಭಾಂಗಣ ನಿರ್ಮಾಣ ಸಮಿತಿಯ ಅಧ್ಯಕ್ಷರಾದ ಇನ್ನಾ ವಿಠಲ ಮೂಲ್ಯ ಅವರು “ರಜತ ಮಹೋತ್ಸವ ಸಭಾಂಗಣ” ವನ್ನು ಉದ್ಘಾಟಿಸಿದರು.
ಸಮಾರಂಭದ ವೇದಿಕೆಯಲ್ಲಿ ಕಾರ್ಕಳ ಅಮ್ಮಾಸ್ ಸ್ಪೋಟ್ರ್ಸ್ & ಗಿಫ್ಟ್ ಸೆಂಟರ್ನ ಮಾಲಕರಾದ ಸುಧೀರ್ ಪೂಜಾರಿ, ಬೆಳ್ಮಣ್ಣು ಜೇಸಿಐ ಘಟಕದ ಅಧ್ಯಕ್ಷರಾದ ಸರಿತಾ ದಿನೇಶ್ ಸುವರ್ಣ, ಕುಂಟಲಗುಂಡಿ ಸುನಿಲ್ ಪೂಜಾರಿ, ಗೀತಾ ಶೆಟ್ಟಿ ಕುಂಟಲಗುಂಡಿ, ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ನ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಅಬ್ಬನಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ಕಾಸರಬೈಲು ಸುರೇಶ್ ಪೂಜಾರಿ, ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ನ ನಿಕಟ ಪೂರ್ವಾಧ್ಯಕ್ಷ ಪ್ರಶಾಂತ್ ಪೂಜಾರಿ, ಕಾರ್ಯದರ್ಶಿ ವೀಣಾ ಪೂಜಾರಿ, ಮಹಿಳಾ ಸಂಘಟನಾ ಕಾರ್ಯದರ್ಶಿ ಪದ್ಮಶ್ರೀ ಪೂಜಾರಿ, ಅಬ್ಬನಡ್ಕ ಗಣೇಶೋತ್ಸವ ಸಮಿತಿಯ ಕಾರ್ಯದರ್ಶಿ ಯೋಗೀಶ್ ಆಚಾರ್ಯ ಮೊದಲಾದವರಿದ್ದರು.