

ಬೆಳ್ಮಣ್ಣು ಪ್ರಾಥಮಿಕ ಆರೋಗ್ಯ ಕೇಂದ್ರ, ಹೊಸಮಾರು ಅಂಗನವಾಡಿ ಕೇಂದ್ರ, ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ಸಹಯೋಗದಲ್ಲಿ ಬೆಳ್ಮಣ್ಣು ಹೊಸಮಾರು ಅಂಗನವಾಡಿ ಕೇಂದ್ರದಲ್ಲಿ 5 ವರ್ಷದ ಒಳಗಿನ ಮಕ್ಕಳಿಗೆ 2024ನೇ ಸಾಲಿನ ಪಲ್ಸ್ ಪೋಲಿಯೋ ಲಸಿಕೆ ಹಾಕುವ ಕಾರ್ಯಕ್ರಮ ಜರಗಿತು.
ಈ ಸಂದರ್ಭದಲ್ಲಿ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ನ ಅಧ್ಯಕ್ಷರಾದ ಬೀರೊಟ್ಟು ದಿನೇಶ್ ಪೂಜಾರಿ, ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಪೂರ್ವಾಧ್ಯಕ್ಷರಾದ ಸುರೇಶ್ ಪೂಜಾರಿ ಕಾಸ್ರಬೈಲು, ಕಾರ್ಯದರ್ಶಿ ವೀಣಾ ಪೂಜಾರಿ, ಸದಸ್ಯರಾದ ಸುನೀತಾ ಪಿಂಟೋ, ವೀಣಾ ಆಚಾರ್ಯ, ಬೆಳ್ಮಣ್ಣು ಪ್ರಾಥಮಿಕ ಆರೋಗ್ಯ ಕೇಂದ್ರದ ಆಶಾ ಕಾರ್ಯಕರ್ತೆ ಹಾಗೂ ಹೊಸಮಾರು, ಪೆರಲ್ಪಾದೆ, ಇಟ್ಟಮೇರಿ ಅಂಗನವಾಡಿ ಕೇಂದ್ರದ ಶಿಕ್ಷಕಿಯರು ಮೊದಲಾದವರು ಉಪಸ್ಥಿತಿತರಿದ್ದರು.