ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ಶ್ರಮದಾನ ಕಾರ್ಯಕ್ರಮ

ವರದಿ:  ವಾಲ್ಟರ್ಮೊಂತೇರೊ, ಬೆಳ್ಮಣ್ಣು


ನೆಹರು ಯುವ ಕೇಂದ್ರ ಉಡುಪಿ ಹಾಗೂ ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಇದರ ಸಂಯುಕ್ತ ಆಶ್ರಯದಲ್ಲಿ ನಂದಳಿಕೆ ಅಬ್ಬನಡ್ಕದ ಕುಂಟಲಗುಂಡಿಯಲ್ಲಿರುವ ಸಂಘದ ರಂಗಮಂದಿರದ ಬಳಿ ಸಂಘದ ಸದಸ್ಯರಿಂದ ಶ್ರಮದಾನ ಕಾರ್ಯಕ್ರಮ ಜರಗಿತು.
ಶ್ರಮದಾನ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಅಧ್ಯಕ್ಷ ಪ್ರಶಾಂತ್ ಪೂಜಾರಿ ಅವರು ಅಧ್ಯಕ್ಷತೆ ವಹಿಸಿ ಶ್ರಮದಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂಧರ್ಭದಲ್ಲಿ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಪೂರ್ವಾಧ್ಯಕ್ಷರಾದ ಆನಂದ ಪೂಜಾರಿ, ರಾಜೇಶ್ ಕೋಟ್ಯಾನ್, ಅಬ್ಬನಡ್ಕ ಸತೀಶ್ ಪೂಜಾರಿ, ಉಪಾಧ್ಯಕ್ಷ ಸುರೇಶ್ ಅಬ್ಬನಡ್ಕ, ಕಾರ್ಯದರ್ಶಿ ಸುರೇಶ್ ಕಾಸ್ರಬೈಲು, ಜೊತೆ ಕಾರ್ಯದರ್ಶಿ ಪುಷ್ಪ ಕುಲಾಲ್, ಕೋಶಾಧಿಕಾರಿ ವೀಣಾ ಪೂಜಾರಿ, ಸದಸ್ಯರಾದ ಲಲಿತಾ ಆಚಾರ್ಯ, ಸುಲೋಚನಾ ಕೋಟ್ಯಾನ್, ಅಶ್ವಿನಿ ಪೂಜಾರಿ, ಸುದರ್ಶನ್ ಸಾಲ್ಯಾನ್, ಪ್ರಶಾಂತ್ ಬೋಳ ಮೊದಲಾದವರಿದ್ದರು.