

ನಂದಳಿಕೆ: ತನ್ನದೇಯಾದ ವಿಶೇಷ ಸಾಮಾಜಿಕ ಕಾರ್ಯಕ್ರಮಗಳ ಮೂಲಕ ಪರಿಸರದಾದ್ಯಂತ ಮನೆಮಾತಾಗಿರುವ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ (ರಿ.)ನ ವತಿಯಿಂದ ಸಂಘದ 23ನೇ ವರ್ಷದ ಸ್ಥಾಪನಾ ದಿನಾಚರಣೆ ಅಂಗವಾಗಿ ಅಬ್ಬನಡ್ಕದಿಂದ ಮಂಜರಪಲ್ಕೆಗೆ ಹೋಗುವ ರಸ್ತೆಯಲ್ಲಿ ಅಲ್ಲಲ್ಲಿ ಹಲವಾರು ಗುಂಡಿಗಳಿದ್ದು ವಾಹನ ಸವಾರರಿಗೆ ಸಂಚಾರಿಸಲು ಬಹಳಷ್ಟು ಕಷ್ಟವಾಗುತ್ತಿದ್ದನ್ನು ಮನಗಂಡ ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ನ ಸದಸ್ಯರೆಲ್ಲರೂ ಕಾಯಕವೇ ಕೈಲಾಸವೆಂಬಂತೆ ಎಲ್ಲರೂ ಬಟ್ಟು ಸೇರಿ ರಸ್ತೆಯಲ್ಲಿರುವ ಗುಂಡಿಗಳಿಗೆ ಡೆಸ್ಟ್ ಹುಡಿ ಹಾಕುವ ಕೆಲಸ ಕಾರ್ಯವನ್ನು ನಡೆಸಿದರು ಹಾಗೂ ರಸ್ತೆ ಎರಡು ಬದಿಯಲ್ಲಿದ್ದ ಪ್ಲಾಸ್ಟಿಕ್, ಕಸಕಡ್ಡಿಗಳನ್ನು ಸ್ವಚ್ಛತೆ ಮಾಡುವ ಮೂಲಕ ಸ್ವಚ್ಛತಾ ಕಾರ್ಯಕ್ರಮ ನಡೆಸಿ ವಿನೂತನ ರೀತಿಯಲ್ಲಿ ಸಂಘದ ಸ್ಥಾಪನಾ ದಿನಾಚರಣೆ ಆಚರಿಸುವುದರೊಂದಿಗೆ ಸ್ಥಳೀಯರ ಪ್ರಶಂಸೆಗೆ ಪಾತ್ರರಾದರು.

ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ (ರಿ.)ನ ಅಧ್ಯಕ್ಷರಾದ ಪ್ರಶಾಂತ್ ಪೂಜಾರಿ, ಸಂಘದ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ದಿನೇಶ್ ಪೂಜಾರಿ, ಪೂರ್ವಾಧ್ಯಕ್ಷರಾದ ಆನಂದ ಪೂಜಾರಿ, ಸುರೇಶ್ ಕಾಸ್ರಬೈಲು, ಸತೀಶ್ ಅಬ್ಬನಡ್ಕ, ಉದಯ ಅಂಚನ್, ಉಪಾಧ್ಯಕ್ಷರಾದ ಲೀಲಾ ಪೂಜಾರಿ, ಕಾರ್ಯದರ್ಶಿ ಲಲಿತಾ ಆಚಾರ್ಯ, ಜೊತೆ ಕಾರ್ಯದರ್ಶಿ ಸುದರ್ಶನ್ ಕುಂದರ್, ಮಹಿಳಾ ಸಂಘಟನಾ ಕಾರ್ಯದರ್ಶಿ ಪದ್ಮಶ್ರೀ ಪೂಜಾರಿ, ಅಬ್ಬನಡ್ಕ ಶ್ರೀ ವನದುರ್ಗಾ ಸ್ವ-ಸಹಾಯ ಸಂಘದ ಅಧ್ಯಕ್ಷೆ ವೀಣಾ ಪೂಜಾರಿ, ಅಬ್ಬನಡ್ಕ ಭಜನಾ ಮಂಡಳಿಯ ಅಧ್ಯಕ್ಷೆ ಸುಲೋಚನಾ, ಕಾರ್ಯದರ್ಶಿ ಕೀರ್ತನ್ ಕುಮಾರ್, ಗೌರವಾಧ್ಯಕ್ಷರಾದ ರಾಜೇಶ್ ಕೋಟ್ಯಾನ್, ಸದಸ್ಯರಾದ ಸುರೇಶ್ ಅಬ್ಬನಡ್ಕ ಹರಿಣಾಕ್ಷಿ, ಅಶ್ವಿನಿ, ಯಶವಂತ್ ಕುಲಾಲ್ ಮೊದಲಾದವರು ಉಪಸ್ಥಿತಿತರಿದ್ದರು.

