ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್, ಕನ್ನಡ ಜಾನಪದ ಪರಿಷತ್ತು ಕಾರ್ಕಳ ತಾಲೂಕು ಘಟಕ, ಕನ್ನಡ ಸಂಸ್ಕøತಿ ಇಲಾಖೆ, ಉಡುಪಿ ಜಿಲ್ಲೆ ಇದರ ಸಂಯುಕ್ತ ಆಶ್ರಯದಲ್ಲಿ ನಂದಳಿಕೆ ಅಬ್ಬನಡ್ಕದ ಕುಂಟಲಗುಂಡಿಯಲ್ಲಿರುವ ವರಕವಿ ಮುದ್ದಣನ ಊರಿನಲ್ಲಿ ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‍ನ ರಂಗಮಂದಿರದಲ್ಲಿ 67ನೇ ಕರ್ನಾಟಕ ರಾಜ್ಯೋತ್ಸವ ಸಂಭ್ರಮ ಅತ್ಯಂತ ಯಶಸ್ವಿಯಾಗಿ ಜರಗಿತು. ಕನ್ನಡಾಂಬೆಯ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ದೀಪ ಬೆಳಗಿಸಿ ಪುಷ್ಪರ್ಚನೆ ಸಲ್ಲಿಸಲಾಯಿತು.
ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಅಧ್ಯಕ್ಷರಾದ ನಂದಳಿಕೆ ಪ್ರಶಾಂತ್ ಪೂಜಾರಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದವರು ಸಮೃದ್ಧ, ಸದೃಢ, ಸ್ವಾಭಿಮಾಣದ ಕರ್ನಾಟಕಕ್ಕಾಗಿ ನಾವೆಲ್ಲರೂ ಪಣತೊಡಬೇಕಾಗಿದೆ ಎಂದರು.
ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕನ್ನಡ ಜಾನಪದ ಪರಿಷತ್ತು ಕಾರ್ಕಳ ತಾಲೂಕು ಘಟಕದ ಅಧ್ಯಕ್ಷರಾದ ದೇವದಾಸ್ ಮಾತನಾಡಿ ರಾಜ್ಯದ ಸಂಸ್ಕøತಿ ಮತ್ತು ಇತಿಹಾಸವನ್ನು ಉಳಿಸಿ ಬೆಳೆಸುವ ಕೆಲಸ ನಮ್ಮಿಂದಾಗಬೇಕಾಗಿದೆ ಎಂದರು.
ಮುಖ್ಯ ಅತಿಥಿ ಕನ್ನಡ ಜಾನಪದ ಪರಿಷತ್ತು ಕಾರ್ಕಳ ತಾಲೂಕು ಘಟಕದ ಸಂಚಾಲಕರಾದ ಚಂದ್ರನಾಥ್ ಬಜಗೋಳಿ ಮಾತನಾಡಿ ಸಾಂಸ್ಕøತಿಕವಾಗಿ, ಧಾರ್ಮಿಕವಾಗಿ ಮತ್ತು ಐತಿಹಾಸಿಕವಾಗಿ ಅತ್ಯಂತ ವೈವಿಧ್ಯತೆಯಿಂದ ಕೂಡಿರುವ ಕರ್ನಾಟಕದಲ್ಲಿ ಹುಟ್ಟಿರುವುದೇ ನಮ್ಮ ಭಾಗ್ಯ ಎಂದರು.
ಹಿರಿಯ ದೈವನರ್ತಕರಾದ ಬೋಳ ಕೃಷ್ಣಪ್ಪ ಪಾಣರ ಅವರನ್ನು ಸನ್ಮಾನಿಸಲಾಯಿತು.
ವೇದಿಕೆಯಲ್ಲಿ ಸಂಘದ ಸ್ಥಾಪಕಾಧ್ಯಕ್ಷರಾದ ವಿಠಲ ಮೂಲ್ಯ, ಅಭಿವೃದ್ಧಿ ಸಮಿತಿಯ ಅಧ್ಯಕ್ಷ ದಿನೇಶ್ ಪೂಜಾರಿ ಬೀರೊಟ್ಟು, ನಿಕಟ ಪೂರ್ವಾಧ್ಯಕ್ಷ ಉದಯ ಅಂಚನ್ ಮೊದಲಾದವರಿದ್ದರು.
ಬೋಳ ನಮಿತಾ ಮತ್ತು ಪದ್ಮಶ್ರೀ ಪೂಜಾರಿ ನಾಡಗೀತೆ ಹಾಡಿದರು. ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ ಕಾರ್ಯಕ್ರಮ ನಿರೂಪಿಸಿದರು. ದೇವದಾಸ್ ಸ್ವಾಗತಿಸಿದರು. ಲಲಿತಾ ಆಚಾರ್ಯ ವಂದಿಸಿದರು. ಸಂಧ್ಯಾ ಶೆಟ್ಟಿ ಸನ್ಮಾನಿತರ ಪರಿಚಯ ವಾಚಿಸಿದರು.
ಸಾಂಸ್ಕøತಿಕ ಕಾರ್ಯಕ್ರಮದ ಅಂಗವಾಗಿ ಅಮಿತಾ ಮತ್ತು ತಂಡದವರಿಂದ ಕನ್ನಡ ಗೀತಾ ಗಾಯನ ಹಾಗೂ ಸುಗಮ ಸಂಗೀತ ಕಾರ್ಯಕ್ರಮ ಜರಗಿತು.