ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ನ 24ನೇ ವರ್ಷಾಚರಣೆ ಅಂಗವಾಗಿ ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ರಂಗಮಂದಿರದ ಬಳಿ ಅಂತರ್ ಜಿಲ್ಲಾ ಮಟ್ಟದ ಪುರುಷರ ವಿಭಾಗದ ಮ್ಯಾಟ್ ಅಂಕಣದ 65 ಕೆಜಿ ವಿಭಾಗದ ಕಬಡ್ಡಿ ಪಂದ್ಯಾಟ ಜರಗಿತು.
ನಂದಳಿಕೆ ಅಬ್ಬನಡ್ಕ ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷರಾದ ದಿನೇಶ್ ಪೂಜಾರಿ, ಬೀರೊಟ್ಟು ಅವರು ಅಧ್ಯಕ್ಷತೆ ವಹಿಸಿದ್ದರು. ನಿಟ್ಟೆ ಅರುಣ್ ಕುಮಾರ್ ಅವರು ಕಬಡ್ಡಿ ಪಂದ್ಯಾಟ ಉದ್ಘಾಟಿಸಿದರು. ಕಾಪು ತಾಲೂಕು ಯುವಜನ ಸೇವಾ ಕ್ರೀಡಾಧಿಕಾರಿ ಸೂಡ ರಿತೇಶ್ ಶೆಟ್ಟಿ ಅವರು ಕಬಡ್ಡಿ ಪಂದ್ಯಾಟಕ್ಕೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕರಾದ ವಿ. ಸುನಿಲ್ ಕುಮಾರ್, ಮುನಿಯಾಲು ಉದಯ ಕೃಷ್ಣಯ್ಯ ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷರಾದ ಮುನಿಯಾಲು ಉದಯ ಶೆಟ್ಟಿ, ನಂದಳಿಕೆ ಗ್ಲೆನಿಶಿಯಾ ವುಡ್ ಇಂಡಸ್ಟ್ರೀಸ್ ಮಾಲಕರಾದ ಗ್ರೆಗರಿ ಮಿನೇಜಸ್, ದೈವಾರಾಧಕರಾದ ಬೋಳ ಜಗದೀಶ್ ನಲ್ಕೆ, ಅಂತರಾಷ್ಟ್ರೀಯ ಕ್ರೀಡಾಪಟು ಅಕ್ಷತಾ ಪೂಜಾರಿ ಬೋಳ, ನಂದಳಿಕೆ ಶ್ರೀ ದುರ್ಗಾಪರಮೇಶ್ವರೀ ಟ್ರಾನ್ಸ್ಪೋಟ್ರ್ಸ್ ಮಾಲಕರಾದ ಹರೀಶ್ ಕುಮಾರ್ ನಂದಳಿಕೆ, ಕಾರ್ಕಳ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷರಾದ ಬೋಳ ಜಯರಾಮ್ ಸಾಲ್ಯಾನ್, ಕಾರ್ಕಳ ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ನಿಟ್ಟೆ ಪ್ರವೀಣ್ ಸಾಲ್ಯಾನ್, ಬೋಳ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಬೋಳ ಸತೀಶ್ ಪೂಜಾರಿ, ಇನ್ನಾ ಗ್ರಾಮ ಪಂಚಾಯತ್ ನಿಕಟ ಪೂರ್ವಾಧ್ಯಕ್ಷರಾದ ಕುಶ ಮೂಲ್ಯ ಇನ್ನಾ, ಬೆಳ್ಮಣ್ಣು ಸೂರಜ್ ಹೊಟೇಲ್ ಮಾಲಕರಾದ ಶೋಧನ್ ಕುಮಾರ್ ಶೆಟ್ಟಿ, ಉದ್ಯಮಿ ಕಾಡಿಕಂಬಳ ಸುರೇಶ್ ಶೆಟ್ಟಿ, ಬೆಳ್ಮಣ್ಣು ವಿಶ್ವ ಹಿಂದೂ ಪರಿಷದ್ ಅಧ್ಯಕ್ಷರಾದ ಇಂದಾರು ಪ್ರಭಾಕರ್ ಶೆಟ್ಟಿ, ಮಂಗಳೂರು ಎಂ.ಸಿ.ಎಫ್. ಮಾರ್ಕೆಟ್ ಡೆವಲಪ್ಮೆಂಟ್ ಜೆ.ಜಿ.ಎಂ. ಕೆ.ಬಿ.ಕೀರ್ತನ್ ಕುಮಾರ್ ಕಾರ್ಕಳ, ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಮುಂಡ್ಕೂರು ರವೀಂದ್ರ ಶೆಟ್ಟಿ, ಉದ್ಯಮಿಗಳಾದ ನಂದಳಿಕೆ ಉಮೇಶ್ ಶೆಟ್ಟಿ, ನ್ಯಾಯವಾದಿಗಳಾದ ಬೆಳ್ಮಣ್ಣು ರವೀಂದ್ರ ಶೆಟ್ಟಿ ಮೊದಲಾದವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ನ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಸ್ಥಾಪಕಾಧ್ಯಕ್ಷರಾದ ಇನ್ನಾ ವಿಠಲ ಮೂಲ್ಯ, ಕಬಡ್ಡಿ ಪಂದ್ಯಾಟದ ನಿರ್ದೇಶಕರಾದ ಬೋಳ ಉದಯ ಅಂಚನ್, ಕಾರ್ಯದರ್ಶಿ ವೀಣಾ ಪೂಜಾರಿ, ಮಹಿಳಾ ಸಂಘಟನಾ ಕಾರ್ಯದರ್ಶಿ ಪದ್ಮಶ್ರೀ ಪೂಜಾರಿ ಮೊದಲಾದವರಿದ್ದರು.