ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್, ಜೇಸಿಐ ಬೆಳ್ಮಣ್ಣು ಮತ್ತು ಯುವ ಜೇಸಿ ವಿಭಾದ ನೇತೃತ್ವದಲ್ಲಿ ಕುಡುಂದೂರಿನ ಬೆರಣಗುಡ್ಡೆಯ ಗದ್ದೆಯಲ್ಲಿ ಸಂಘದ ಸದಸ್ಯರಿಂದ ಗದ್ದೆ ನಾಟಿ ನಡೆಸಲಾಯಿತು.
ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ನ ಪೂರ್ವಾಧ್ಯಕ್ಷರು, ಯುವ ಕೃಷಿಕರಾದ ರಾಜೇಶ್ ಕೋಟ್ಯಾನ್ ಅವರ ನೇತೃತ್ವದಲ್ಲಿ ಕುಡುಂದೂರಿನ ಬೆರಣಗುಡ್ಡೆಯ ಗದ್ದೆಯಲ್ಲಿ ಭತ್ತದ ನೇಜಿ ನಾಟಿ ಮಾಡಿ, ಯುವಜನರಲ್ಲಿ ಕೃಷಿಯ ಬಗ್ಗೆ ಆಸಕ್ತಿ ಮೂಡಿಸುವ ಪ್ರಯತ್ನ ಮಾಡಲಾಯಿತು. ಸಂಘದ ಸದಸ್ಯರು ಜತೆಗೂಡಿ ಕೃಷಿ ಪರಂಪರೆಯನ್ನು ಉಳಿಸಿ ಬೆಳೆಸುವಲ್ಲಿ ತಮ್ಮನ್ನು ತೊಡಗಿಸಿಕೊಂಡರು.
ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಪ್ರಶಾಂತ್ ಪೂಜಾರಿ ಮಾತನಾಡಿ ಕೃಷಿಯಿಂದ ವಿಮುಖರಾಗುತ್ತಿರುವ ಯುವಜನತೆಗೆ ಹಾಗೂ ಸಾಗುವಳಿ ಮಾಡಲು ಅನಾನುಕೂಲದಿಂದ ಗದ್ದೆಗಳನ್ನು ಹಡೀಲು ಬಿಟ್ಟವರಿಗೆ ಅಬ್ಬನಡ್ಕ ಸಂಘದ ಕೆಲಸವು ಪ್ರೇರಣೆಯಾಗಲಿ ಎಂದರು.
ಕಾರ್ಯಕ್ರಮದಲ್ಲಿ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಬೆಳ್ಮಣ್ಣು ಜೇಸಿಯ ಅಧ್ಯಕ್ಷ ಅಬ್ಬನಡ್ಕ ಸತೀಶ್ ಪೂಜಾರಿ, ಬೆಳ್ಮಣ್ಣು ಯುವ ಜೇಸಿ ಅಧ್ಯಕ್ಷ ಕೀರ್ತನ್ ಪೂಜಾರಿ, ಸಂಘದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಬೀರೊಟ್ಟು ದಿನೇಶ್ ಪೂಜಾರಿ, ಕಾರ್ಯದರ್ಶಿ ಲಲಿತಾ ಆಚಾರ್ಯ, ಮಹಿಳಾ ಸಂಘಟನಾ ಕಾರ್ಯದರ್ಶಿ ಪದ್ಮಶ್ರೀ ಪೂಜಾರಿ ಮೊದಲಾದವರಿದ್ದರು.
ಈ ಸಂದರ್ಭದಲ್ಲಿ ಸಂಘದ ಪೂರ್ವಾಧ್ಯಕ್ಷರಾದ ಆನಂದ ಪೂಜಾರಿ, ಸುರೇಶ್ ಕಾಸ್ರಬೈಲು, ರಾಜೇಶ್ ಕೋಟ್ಯಾನ್, ಉದಯ ಅಂಚನ್, ಸದಸ್ಯರಾದ ಮಂಜುನಾಥ ಆಚಾರ್ಯ, ಸುರೇಶ್ ಅಬ್ಬನಡ್ಕ, ವೀಣಾ ಪೂಜಾರಿ, ಆರತಿ ಕುಮಾರಿ, ಹರೀಶ್ ಪೂಜಾರಿ, ಪುಷ್ಪ ಕುಲಾಲ್, ಸಂಧ್ಯಾ ಶೆಟ್ಟಿ, ಸುಲೋಚನಾ ಕೋಟ್ಯಾನ್, ಶಾಂತರಾಮ್ ಕುಲಾಲ್ ಮೊದಲಾದವರಿದ್ದರು.