ನಂದಳಿಕೆ : ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕ್ರತ ಸಂಸ್ಥೆ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಅಬ್ಬನಡ್ಕ- ನಂದಳಿಕೆಯ ನೇತೃತ್ವದಲ್ಲಿ ಅಬ್ಬನಡ್ಕದ ಕುಂಟಲಗುಂಡಿಯಲ್ಲಿ ಡಿಸೆಂಬರ್ 10ರಂದು ಆದಿತ್ಯವಾರ ಜರಗಲಿರುವ ಅಂತರ್ ಜಿಲ್ಲಾ ಮಟ್ಟದ ಮಕ್ಕಳ ಸಾಂಸ್ಕ್ರತಿಕ ಸಮ್ಮೇಳನದ ಸಿದ್ಧತೆ ಬಗ್ಗೆ ಪೂರ್ವಭಾವಿ ಸಭೆ ನಡೆಯಿತು.
ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ನ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ ಮಾತನಾಡಿದವರು ಅಂತರ್ ಜಿಲ್ಲಾ ಮಟ್ಟದ ಮಕ್ಕಳ ಸಾಂಸ್ಕ್ರತಿಕ ಸಮ್ಮೇಳನದಲ್ಲಿ ಮೆರವಣಿಗೆ, ನೃತ್ಯ ಭಜನೆ, ಚೆಂಡೆ ವಾದನ, ಯಕ್ಷಗಾನ ನೃತ್ಯ, ಜಾನಪದ ನೃತ್ಯ, ಸಾಂಸ್ಕøತಿಕ ವೈವಿಧ್ಯ, ಸಂಗೀತ ರಸದೌತಣ, ಸಂವಾದ, ಗೋಷ್ಠಿ ಸೇರಿದಂತೆ ಸಾಂಸ್ಕøತಿಕ ಕಾರ್ಯಕ್ರಮದ ನಿರೂಪಣೆ ಎಲ್ಲವೂ ಅಂತರ್ ಜಿಲ್ಲಾ ಬಹುಮುಖ ಪ್ರತಿಭೆಯ ಮಕ್ಕಳಿಂದಲೇ ಜರಗಲಿದೆ, ಟಿವಿ ರಿಯಾಲಿಟಿ ಶೋ, ಬಾಲನಟಿಯಾಗಿ ಮಿಂಚಿರುವ ಹಲವಾರು ಪ್ರತಿಭೆಗಳು ಈ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ ಎಂದರು.
ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ನ ಅಧ್ಯಕ್ಷರಾದ ಬೀರೊಟ್ಟು ದಿನೇಶ್ ಪೂಜಾರಿ ಅವರು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿದ್ದರು.
ಸಭೆಯಲ್ಲಿ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ನ ಪೂರ್ವಾಧ್ಯಕರಾದ ಆನಂದ ಪೂಜಾರಿ, ಅಬ್ಬನಡ್ಕ ಸತೀಶ್ ಪೂಜಾರಿ, ಬೋಳ ಉದಯ ಅಂಚನ್, ಸತೀಶ್ ಪೂಜಾರಿ, ಕಾರ್ಯದರ್ಶಿ ವೀಣಾ ಪೂಜಾರಿ, ಜೊತೆ ಕಾರ್ಯದರ್ಶಿ ಮಂಜುನಾಥ ಆಚಾರ್ಯ, ಸದಸ್ಯರಾದ ಹರೀಶ್ ಪೂಜಾರಿ, ಸುರೇಶ್ ಅಬ್ಬನಡ್ಕ, ಲೀಲಾ ಪೂಜಾರಿ, ಹರಿಣಿ ಪೂಜಾರಿ, ಸುಲೋಚನಾ ಕೋಟ್ಯಾನ್, ಸಂಧ್ಯಾ ಶೆಟ್ಟಿ, ಹರಿಣಾಕ್ಷಿ ಪೂಜಾರಿ, ಕೀರ್ತನ್ ಪೂಜಾರಿ, ವೀಣಾ ಆಚಾರ್ಯ, ಯೋಗೀಶ್ ಆಚಾರ್ಯ, ಸುದರ್ಶನ್ ಆಚಾರ್ಯ, ಬ್ರಹ್ಮಾನಂದ ಆಚಾರ್ಯ, ಅನ್ನಪೂರ್ಣ ಕಾಮತ್, ಅಭಿಷೇಕ್ ಕುಲಾಲ್ ಮೊದಲಾದವರಿದ್ದರು.