ಪಕ್ಷಿಗಳಿಗೆ ಬಿಸಿಲಿನ ತಾಪದಿಂದ ಹಾಗೂ ನೀರಿನ ದಾಹ ನೀಗಿಸುವ ಉದ್ದೇಶದಿಂದ ಪಕ್ಷಿ ಸಂಕುಲಕ್ಕೆ ನೀರು ಉಣಿಸುವ ಅಭಿಯಾನದ ಮೂಲಕ ನಾವೆಲ್ಲರೂ ಸ್ವಯಂ ಪ್ರೇರಣೆಯಿಂದ ಮನೆ, ಮರಗಳ ಮೇಲೆ ಪಕ್ಷಿಗಳಿಗಾಗಿ ನೀರು, ಧಾನ್ಯಗಳನ್ನು ಇಟ್ಟು ಪಕ್ಷಿ ಸಂಕುಲದ ರಕ್ಷಣೆಗೆ ಕೈ ಜೋಡಿಸೋಣ ಎಂದು ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಸಂಚಾಲಕರು ಸಂದೀಪ್ ವಿ. ಪೂಜಾರಿ ಅಬ್ಬನಡ್ಕ ಹೇಳಿದರು.
ಭಾರತ ಸರಕಾರದ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಉಡುಪಿ, ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಮತ್ತು ಜೇಸಿಐ ಬೆಳ್ಮಣ್ಣು ವತಿಯಿಂದ ಅಬ್ಬನಡ್ಕದ ಕುಂಟಲಗುಂಡಿಯಲ್ಲಿ ಹಲವಾರು ಗಿಡ ಮರಗಳಲ್ಲಿ ಪಕ್ಷಿಗಳಿಗೆ ಉರಿ ಬಿಸಿಲ ಸೆಕೆಯ ದಾಹ ತಣಿಸಲು ಹಕ್ಕಿಗಳಿಗೆ ನೀರಿಡುವ ವ್ಯವಸ್ಥೆಗಳನ್ನು ಮಾಡಲಾಯಿತು.
ಈ ಸಂದರ್ಭದಲ್ಲಿ ಬೆಳ್ಮಣ್ಣು ಜೇಸಿಐ ಅಧ್ಯಕ್ಷ ಸತೀಶ್ ಪೂಜಾರಿ ಅಬ್ಬನಡ್ಕ, ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಸಂಘದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ದಿನೇಶ್ ಪೂಜಾರಿ ಬೀರೊಟ್ಟು, ಪೂರ್ವಾಧ್ಯಕ್ಷರಾದ ಸುರೇಶ್ ಕಾಸ್ರಬೈಲು, ರಾಜೇಶ್ ಕೋಟ್ಯಾನ್, ಉದಯ ಅಂಚನ್, ಉಪಾಧ್ಯಕ್ಷೆ ಲೀಲಾ ಪೂಜಾರಿ, ಜೊತೆ ಕಾರ್ಯದರ್ಶಿ ಸುದರ್ಶನ್ ಕುಂದರ್, ಮಹಿಳಾ ಸಂಘಟನಾ ಕಾರ್ಯದರ್ಶಿ ಪದ್ಮಶ್ರೀ ಪೂಜಾರಿ, ಸದಸ್ಯರಾದ ಮಂಜುನಾಥ ಆಚಾರ್ಯ, ಸುರೇಶ್ ಅಬ್ಬನಡ್ಕ, ಸಂಧ್ಯಾ ಶೆಟ್ಟಿ, ಆರತಿ ಕುಮಾರಿ, ಕೀರ್ತನ್ ಕುಮಾರ್, ಹರೀಶ್ ಪೂಜಾರಿ, ಸುಲೋಚನಾ ಕೋಟ್ಯಾನ್, ಪುಷ್ಪ ಕುಲಾಲ್, ವೀಣಾ ಪೂಜಾರಿ, ಯಶವಂತ್ ಕುಲಾಲ್ ಮೊದಲಾದವರಿದ್ದರು.