ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‍ನಲ್ಲಿ ಮಾಸ್ತಿ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಬೆಳ್ಮಣ್ಣು ಜನಾರ್ಧನ ಭಟ್ ಅವರಿಗೆ ಸನ್ಮಾನ

ವರದಿ:  ವಾಲ್ಟರ್  ಮೊಂತೇರೊ, ಬೆಳ್ಮಣ್ಣು


ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ನೇತೃತ್ವದಲ್ಲಿ ಕೃತಿ ಲೋಕಾರ್ಪಣೆ ಸಮಾರಂಭದಲ್ಲಿ ಬೂಬರಾಜ ಸಾಮ್ರಾಜ್ಯ ಕೃತಿಗೆ “ಮಾಸ್ತಿ ಪ್ರಶಸ್ತಿ ಪುರಸ್ಕøತ ಬೆಳ್ಮಣ್ಣು ಜನಾರ್ಧನ ಭಟ್ ಅವರನ್ನು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ ಜಿಲ್ಲಾಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗರವರು ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‍ನ ರಂಗಮಂದಿರದಲ್ಲಿ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಲಯನ್ಸ್ ಜಿಲ್ಲಾ ನಿಕಟಪೂರ್ವ ಜಿಲ್ಲಾ ಗವರ್ನರ್ ಎನ್. ಎಂ. ಹೆಗ್ಡೆ, ಕಾರ್ಕಳ ತಾಲೂಕು ಕಸಾಪ ನಿಕಟ ಪೂರ್ವಾಧ್ಯಕ್ಷರಾದ ಕೊಂಡಳ್ಳಿ ಪ್ರಭಾಕರ ಶೆಟ್ಟಿ, ಮೀನಕಳಿಯ ಸರಕಾರಿ ಪ್ರೌಢಶಾಲೆಯ ಶಿಕ್ಷಕರಾದ ನಿರಂಜನ್ ವಿ. ನಾಯಕ್, ಬೆಳ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನ ಶಿಕ್ಷಕಿ ಶುಭಲಕ್ಷ್ಮೀ ಆರ್. ನಾಯಕ್, ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‍ನ ಕಾರ್ಯದರ್ಶಿ ಕಾಸ್ರಬೈಲು ಸುರೇಶ್ ಪೂಜಾರಿ, ಮಹಿಳಾ ಸಂಘಟನಾ ಕಾರ್ಯದರ್ಶಿ ಸಂಧ್ಯಾ ಶೆಟ್ಟಿ ಉಪಸ್ಥಿತಿತರಿದ್ದರು.
ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಅಧ್ಯಕ್ಷ ಪ್ರಶಾಂತ್ ಪೂಜಾರಿಯವರು ಸ್ವಾಗತಿಸಿದರು. ಸಂಚಾಲಕ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ ಕಾರ್ಯಕ್ರಮ ನಿರೂಪಿಸಿದರು. ನಿಕಟ ಪೂರ್ವ ಕಾರ್ಯದರ್ಶಿ ಅಬ್ಬನಡ್ಕ ಹರಿಪ್ರಸಾದ್ ಆಚಾರ್ಯ ವಂದಿಸಿದರು.