ವರದಿ : ವಾಲ್ಟರ್ ಮೊಂತೇರೊ, ಬೆಳ್ಮಣ್ಣು
ನಂದಳಿಕೆ ಗ್ರಾಮ ಪಂಚಾಯತ್ ಮತ್ತು ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಸಹಯೋಗದಲ್ಲಿ ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‍ನ ಸಭಾಂಗಣದಲ್ಲಿ ಸೋಮವಾರ ನಂದಳಿಕೆ 4ನೇ ವಾರ್ಡ್‍ನವರಿಗೆ ಮಹಾತ್ಮಾಗಾಂಧೀಜಿ ಉದ್ಯೋಗ ಖಾತ್ರಿ ಯೋಜನೆಯ ಮೂಲಕ ಉದ್ಯೋಗ ಕಾರ್ಡ್ ಮೇಳ ಕಾರ್ಯಕ್ರಮ ಜರಗಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಂದಳಿಕೆ ಗ್ರಾಮ ಪಂಚಾಯತ್ ಅಧ್ಯಕ್ಷ ನಿತ್ಯಾನಂದ ಅಮೀನ್ ವಹಿಸಿದ್ದರು. ನಂದಳಿಕೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶಂಕರ್ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿದರು.
ವೇದಿಕೆಯಲ್ಲಿ ಉದ್ಯೋಗ ಖಾತ್ರಿ ಇಂಜಿನಿಯರ್ ದೇವಿಪ್ರಕಾಶ್ ಅವರು ಉದ್ಯೋಗ ಖಾತ್ರಿ ಯೋಜನೆಯಿಂದ ದೊರೆಯುವ ಸೌಲಭ್ಯಗಳ ಕುರಿತು ಜನರಿಗೆ ಮಾಹಿತಿ ನೀಡಿದರು. ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಅಧ್ಯಕ್ಷ ಉದಯ ಅಂಚನ್, ನಂದಳಿಕೆ ಗ್ರಾಮ ಪಂಚಾಯತ್ ಸದಸ್ಯರಾದ ಪದ್ಮಶ್ರೀ ಪೂಜಾರಿ, ಸದಾನಂದ ಶೆಟ್ಟಿ, ಕಾರ್ಕಳ ಆರ್ಥಿಕ ಸಾಕ್ಷರತಾ ಕೇಂದ್ರದ ಸಮಾಲೋಚಕರಾದ ಪ್ರದೀಪ್ ಕೆ. ಅವರು ವೇದಿಕೆಯಲ್ಲಿದ್ದರು.
ನಂದಳಿಕೆ ಗ್ರಾಮ ಪಂಚಾಯತ್ ಕಾರ್ಯದರ್ಶಿ ಸಂಜೀವ ಪೂಜಾರಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಈ ಸಂದರ್ಭದಲ್ಲಿ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಸಂಚಾಲಕ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಪೂವಾಧ್ಯಕ್ಷ ಕಾಸ್ರಬೈಲು ಸುರೇಶ್ ಪೂಜಾರಿ, ಅಬ್ಬನಡ್ಕ ಸತೀಶ್ ಪೂಜಾರಿ, ಸದಸ್ಯರಾದ ಸಂಧ್ಯಾ ಶೆಟ್ಟಿ, ಸುಲೋಚನಾ ಕೋಟ್ಯಾನ್ ಮೊದಲಾದವರಿದ್ದರು.
ಸ್ಥಳೀಯ ಗ್ರಾಮಸ್ಥರು ಉದ್ಯೋಗ ಕಾರ್ಡ್ ಮಾಡಲು ಅರ್ಜಿ ಸಲ್ಲಿಸಿದರು.