ನಂದಳಿಕೆ : ವರಕವಿ ಮುದ್ದಣನ ಹುಟ್ಟೂರಲ್ಲಿ ಮೊಳಗಿದ ಲಕ್ಷ ಕಂಠ ಸಾಮೂಹಿಕ ಕನ್ನಡ ಗೀತ ಗಾಯನ

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ


ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕøತಿ ಹಾಗೂ ಇಂಧನ ಸಚಿವರಾದ ವಿ. ಸುನಿಲ್ ಕುಮಾರ್ ಅವರ ನೇತೃತ್ವದಲ್ಲಿ ಕನ್ನಡ ಸಂಸ್ಕøತಿ ಇಲಾಖೆಯ ವತಿಯಿಂದ ಆಯೋಜಿಸಿದ ಮಾತಾಡ್ ಮಾತಾಡ್ ಕನ್ನಡ ಅಭಿಯಾನದ ಅಂಗವಾಗಿ ಲಕ್ಷ ಕಂಠಗಳ ಸಾಮೂಹಿಕ ಕನ್ನಡ ಗೀತ ಗಾಯನ ಕಾರ್ಯಕ್ರಮವು ಕಾರ್ಕಳ ತಾಲೂಕಿನ ನಂದಳಿಕೆ ವರಕವಿ ಮುದ್ದಣನ ಹುಟ್ಟೂರಲ್ಲಿ ನಂದಳಿಕೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಂಜರಪಲ್ಕೆ ಬೋಳಾಸ್ ಅಗ್ರೊ ಪ್ರೈವೇಟ್ ಲಿಮಿಟೆಡ್ ಕಂಪೆನಿಯಲ್ಲಿ 520ಕ್ಕೂ ಹೆಚ್ಚು ಸಿಬ್ಬಂದಿಗಳೊಂದಿಗೆ ನಂದಳಿಕೆ ಗ್ರಾಮ ಪಂಚಾಯತ್, ಕೆದಿಂಜೆ ಬೋಳಾಸ್ ಆಗ್ರೊ ಪ್ರೈವೇಟ್ ಲಿಮಿಟೆಡ್ ಹಾಗೂ ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಸಹಯೋಗದಲ್ಲಿ ಅತ್ಯಂತ ಯಶಸ್ವಿಯಾಗಿ ಜರಗಿತು.
ಈ ಸಂದರ್ಭದಲ್ಲಿ ನಂದಳಿಕೆ ಗ್ರಾಮ ಪಂಚಾಯತ್ ಅಧ್ಯಕ್ಷ ನಿತ್ಯಾನಂದ ಅಮೀನ್, ಉಡುಪಿ ಜಿಲ್ಲಾ ಪಂಚಾಯತ್ ಸದಸ್ಯೆ ರೇಷ್ಮಾ ಉದಯ ಶೆಟ್ಟಿ, ಕಾರ್ಕಳ ತಾಲೂಕು ಪಂಚಾಯತ್ ಸದಸ್ಯೆ ಪುಷ್ಪ ಸತೀಶ್ ಪೂಜಾರಿ, ಕೆದಿಂಜೆ ಸೂರ್ಯಕಾಂತ್ ಶೆಟ್ಟಿ, ಧೀರಜ್ ನಂದಳಿಕೆ, ಬೋಳಾಸ್ ಅಗ್ರೊ ಪ್ರೈವೇಟ್ ಲಿಮಿಟೆಡ್ ಕಂಪೆನಿಯ ದಾಮೋದರ್ ಕಾಮತ್, ರಾಹುಲ್ ಕಾಮತ್, ನಂದಳಿಕೆ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪುಷ್ಪ, ಸದಸ್ಯರಾದ ಪ್ರಸಾದ್ ಶೆಟ್ಟಿ, ಗಿರೀಶ್ ಶೆಟ್ಟಿ, ಸಂತೋಷ್ ಶೆಟ್ಟಿ, ಸುಧಾಕರ್, ಪದ್ಮಶ್ರೀ ಸತೀಶ್ ಪೂಜಾರಿ, ಯಶೋಧ ದೇವಾಡಿಗ, ಸುಜಾತ ರಾಕೇಶ್ ಕೋಟ್ಯಾನ್, ಅನ್ನಪೂರ್ಣ ಗಂಗಾಧರ್, ಪಂಚಾಯತ್ ಕಾರ್ಯದರ್ಶಿ ಸಂಜೀವ ಪೂಜಾರಿ, ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಅಧ್ಯಕ್ಷ ಪ್ರಶಾಂತ್ ಪೂಜಾರಿ, ಸಂಚಾಲಕ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಪೂವಾಧ್ಯಕ್ಷರಾದ ರಾಜೇಶ್ ಕೋಟ್ಯಾನ್, ಅಬ್ಬನಡ್ಕ ಸತೀಶ್ ಪೂಜಾರಿ, ಕಾರ್ಯದರ್ಶಿ ಸುರೇಶ್ ಕಾಸ್ರಬೈಲು, ಜೊತೆ ಕಾರ್ಯದರ್ಶಿ ಪುಷ್ಪ ಕುಲಾಲ್, ಕೋಶಾಧಿಕಾರಿ ವೀಣಾ ಪೂಜಾರಿ, ಸದಸ್ಯರಾದ ರಾಜೇಂದ್ರ ಶೆಟ್ಟಿಗಾರ್, ರಂಜಿತ್ ಕಲ್ಯಾ ಹಾಗೂ ನಮಿತಾ ಬೋಳ, ಸುಶ್ಮಿತಾ, ಮಂಜುಳಾ, ನಂದಿತಾ ಮೊದಲಾದವರಿದ್ದರು.