ವರದಿ: ವಾಲ್ಟರ್ ಮೊಂತೇರೊ, ಬೆಳ್ಮಣ್ಣು
ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ನೇತೃತ್ವದಲ್ಲಿ ಸಂಘದ 22ನೇ ವರ್ಷಾಚರಣೆ ಅಂಗವಾಗಿ “ಚಿಣ್ಣರ ಹಬ್ಬ” ಸಮಾರಂಭವು ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‍ನ ರಂಗಮಂದಿರದಲ್ಲಿ ಉದ್ಘಾಟನೆಗೊಂಡಿತು.
ಮಕ್ಕಳ ಕನಸು ಚಿಗುರುವ ಬೇಸಿಗೆ ಹಬ್ಬ, ವರ್ಷಪೂರ್ತಿ ದಣಿದ ಮಕ್ಳ ಮನಸ್ಸಿಗೆ ಚೈತನ್ಯ ತುಂಬಲು ಆಯೋಜಿಸಿದ ಒಂದು ದಿನದ ಸಂಭ್ರಮದ ಹಬ್ಬ.
ಸಮಾರಂಭದ ಅಧ್ಯಕ್ಷತೆಯನ್ನು ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷರಾದ ಪ್ರಶಾಂತ್ ಪೂಜಾರಿ ವಹಿಸಿದ್ದರು. ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಸ್ಥಾಪಕಾಧ್ಯಕ್ಷರಾದ ವಿಠಲ ಮೂಲ್ಯ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದವರು ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಲು ಚಿಣ್ಣರ ಹಬ್ಬ ಒಂದು ವೇದಿಕೆಯಾಗಲಿದೆ. ಬರೀ ಅಂಕಗಳನ್ನು ಗಳಿಸುವುದರಿಂದ ಪ್ರಜ್ಞಾವಂತ ನಾಗರಿಕರಾಗುತ್ತಾರೆ ಎಂಬುದು ತಪ್ಪು ಕಲ್ಪನೆಯಾಗಿದೆ. ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಯನ್ನು ಪರಿಚಯಿಸುವ ಮೂಲಕ ಅವರ ಸಾಧನೆಗಳನ್ನು ಪ್ರೋತ್ಸಾಹಿಸಿದಾಗ ಮತ್ತಷ್ಟು ಸಾಧಕರು ಹೊರಬರವಲ್ಲಿ ಯಾವುದೇ ಸಂಶಯವಿಲ್ಲ ಎಂದರು.
ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ನಂದಳಿಕೆ ಗ್ರಾಮ ಪಂಚಾಯತ್ ಸದಸ್ಯೆ ಅಬ್ಬನಡ್ಕ ಪದ್ಮಶ್ರೀ ಸತೀಶ್ ಪೂಜಾರಿ, ಬೋಳ ಗ್ರಾಮ ಪಂಚಾಯತ್ ಸದಸ್ಯ ರಘುವೀರ್ ಶೆಟ್ಟಿ ಭಾಗವಹಿಸಿದ್ದರು.
ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಸಂಚಾಲಕ ಬ್ಬನಡ್ಕ ಸಂದೀಪ್ ವಿ. ಪೂಜಾರಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪೂರ್ವಾಧ್ಯಕ್ಷ ಅಬ್ಬನಡ್ಕ ಸತೀಶ್ ಪೂಜಾರಿ ಸ್ವಾಗತಿಸಿದರು. ಮಹಿಳಾ ಸಂಘಟನಾ ಕಾರ್ಯದರ್ಶಿ ಸಂಧ್ಯಾ ಶೆಟ್ಟಿ ವಂದಿಸಿದರು. ಕಾರ್ಯದರ್ಶಿ ಸುರೇಶ್ ಕಾಸ್ರಬೈಲು ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮದಲ್ಲಿ ಬೆಳಿಗ್ಗೆಯಿಂದ ಸಂಜೆವರೆಗೆ ಭಜನೆ, ವ್ಯಕ್ತಿತ್ವ ವಿಕಸನ ತರಬೇತಿ, ರಸಪ್ರಶ್ನೆ ಸ್ಪರ್ಧೆ, ಯೋಗ ನೃತ್ಯ, ಹಾಡು, ನೃತ್ಯ ಕಲರವ, ಚಿಣ್ಣರ ಕ್ರೀಡಾ ಕಲರವ ಸಂಭ್ರಮದಿಂದ ಜರಗಿತು.
ಸುಮಾರು 80ಕ್ಕೂ ಮಕ್ಕಳು ಈ ಶಿಬಿರದಲ್ಲಿ ವಿವಿಧ ಚಟುವಟಿಕೆಗಳಲ್ಲಿ ಭಾಗವಹಿಸಿದ್ದರು.