ಶ್ರೀನಿವಾಸಪುರ 1 : ರಾಷ್ಟ್ರೀಯ ಹಬ್ಬವನ್ನು ಎಲ್ಲಾ ಕಛೇರಿಗಳಲ್ಲಿ ಖಂಡಿತವಾಗಿ ಆಚರಣೆ ಮಾಡಬೇಕು. ಕಛೇರಿಗಳಲ್ಲಿ ಮಾಡಿದ ನಂತರ ಪುನಃ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಸರ್ಕಾರಿ ಬಾಲಕೀಯರ ಪದವಿಪೂರ್ವ ಕಾಲೇಜು ಆವರಣದಲ್ಲಿ ಹಮ್ಮಿಕೊಳ್ಳಲಾದ ಸಭೆಗೆ ಎಲ್ಲಾ ಅಧಿಕಾರಿಗಳು ಹಾಜಗಾರಬೇಕು ಎಂದು ಅಧಿಕಾರಿಗಳಿಗೆ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಸೂಚಿಸಿದರು.
ಪಟ್ಟಣದ ತಹಶೀಲ್ದಾರ್ ಕಛೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಮಂಗಳವಾರ ಜನವರಿ 26ರ ಗಣರಾಜ್ಯೋತ್ಸವವನ್ನು ಅದ್ದೂರಿಯಾಗಿ ನಡಸಲು ನಡೆದ ಪೂರ್ವಬಾವಿ ಸಭೆಯಲ್ಲಿ ಮಾತನಾಡಿದರು.
ಪಟ್ಟಣದ ಎಲ್ಲಾ ಶಾಲಾಕಾಲೇಜುಗಳ ವಿದ್ಯಾರ್ಥಿಗಳು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಕವಾಯತ್ ನಡೆಸಿ ನಂತರ ಸರ್ಕಾರಿ ಬಾಲಕೀಯರ ಪದವಿಪೂರ್ವ ಕಾಲೇಜು ಆವರಣದಲ್ಲಿ 9 ಗಂಟೆಗೆ ಕಾರ್ಯಕ್ರಮ ಪ್ರಾರಂಭವಾಗುವುರಿಂದ ಕಾರ್ಯಕ್ರಮದಲ್ಲಿ ಶಿಕ್ಷಕರು, ಉಪನ್ಯಾಸಕರು, ವಿವಿಧ ಇಲಾಖೆಯ ಅಧಿಕಾರಿಗಳು, ವಿದ್ಯಾರ್ಥಿಗಳು, ಸಾರ್ವಜನಿಕರು ಭಾಗವಹಿಸಬೇಕೆಂದು ತಿಳಿಸಿದರು.
ಕಾರ್ಯಕ್ರಮವನ್ನು ಅದ್ದೂರಿಯಾಗಿ, ಯಶಸ್ವಿಯಾಗಿ ನಡೆಸಲು ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಕೆಲ ಕೆಲಸಕಾರ್ಯಗಳ ಬಗ್ಗೆ ನಿಯೋಜನೆ ಮಾಡಿದರು.
ತಹಶೀಲ್ದಾರ್ ಜಿ.ಎನ್.ಸುದೀಂದ್ರ, ಇಒ ಶಿವಕುಮಾರಿ, ಪುರಸಭೆ ಮುಖ್ಯಾಧಿಕಾರಿ ವೈ,ಎನ್,ಸತ್ಯನಾರಾಯಣ್, ತಾಲೂಕು ದೈಹಿಕ ಪರಿವೀಕ್ಷಕ ವೆಂಕಟಸ್ವಾಮಿ, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಬೈರೆಡ್ಡಿ, ಪೊಲೀಸ್ ನಿರೀಕ್ಷಕ ಎಂ.ಬಿ.ಗೂರವನಕೊಳ್ಳ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥ್, ರಾಯಲ್ಪಾಡು ಸಿಆರ್ಪಿ ವರದರೆಡ್ಡಿ, ರಾಯಲ್ಪಾಡು ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಮಂಜೇಶ್, ಮುಖಂಡ ಸಿಮೆಂಟ್ ನಾರಾಯಣಸ್ವಾಮಿ ಇದ್ದರು.
16, ಎಸ್ವಿಪುರ್ 1 : ಪಟ್ಟಣದ ತಹಶೀಲ್ದಾರ್ ಕಛೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಜನವರಿ 26ರ ಗಣರಾಜ್ಯೋತ್ಸವವನ್ನು ಅದ್ದೂರಿಯಾಗಿ ನಡಸಲು ನಡೆದ ಪೂರ್ವಬಾವಿ ಸಭೆಯಲ್ಲಿ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಮಾತನಾಡಿದರು.