

ಕುಂದಾಪುರ : ದಿನಾಂಕ 24-01-2024 ರಂದು ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಉಪವಿಭಾಗೀಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಲಿಂಗ ಅಸಮಾತೆಯ ಬಗ್ಗೆ ಜಾಗ್ರತಿ ಮೂಡಿಸಲು ಮತ್ತು ಹೆಣ್ಣು ಮಕ್ಕಳ ಹಕ್ಕುಗಳು ಮತ್ತು ಸಬಲೀಕರಣಕ್ಕಾಗಿ ಪ್ರತಿಪಾ ದಿಸಲು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಈ ಆಸ್ಪತ್ರೆಯ ಮುಖ್ಯ ಆಡಳಿತ ಶಸ್ತ್ರ ಚಿಕಿತ್ಸಕರಾದ ಡಾ. ರಾಬರ್ಟ್ ರೆಬೆಲ್ಲೋ ಇವರು ದೀಪ ಬೆಳಕಿಸುವ ಮೂಲಕ ಕಾರ್ಯಕ್ರಮದ ಉದ್ಘಾಟನೆ ಮಾಡಿದರು. ಈ ಕಾರ್ಯಕ್ರಮಕ್ಕೆ ಈ ಆಸ್ಪತ್ರೆಯ ಇತರೆ ವೈದ್ಯಾಧಿಕಾರಿಗಳು ಹಾಗೂ ಆಸ್ಪತ್ರೆಯ (ಪ್ರಭಾರ ) ಶುಶ್ರುಷ ಅಧಿಕ್ಷಕರಾದ ಶ್ರೀಮತಿ ಅನ್ನಪೂರ್ಣ ಟಿ. ಆರ್ ಮತ್ತು ಆಸ್ಪತ್ರೆಯ ಸಿಬ್ಬಂದಿಗಳು ಹಾಜರಿದ್ದರು. ಈ ಕಾರ್ಯಕ್ರಮಕ್ಕೆ ರೋಟರಿ ಕ್ಲಬ್ ಕುಂದಾಪುರ ಸನ್ ರೈಸ್ ಇಲ್ಲಿಯ ಅಧ್ಯಕ್ಷರು ಹಾಗೂ ಇತರ ಸದಸ್ಯರು ಉಪಸ್ಥಿತರಿದ್ದರು. ಹಾಗೂ ಆಸ್ಪತ್ರೆಯ ಎಲ್ಲಾ ಸಿಬ್ಬಂದಿಯವರು ಈ ಕಾರ್ಯಕ್ರಮವನ್ನು ಅತ್ಯoತ ಯಶಸ್ವಿಗೊಳಿಸಿದರು. ಈ ಕಾರ್ಯಕ್ರಮದಲ್ಲಿ 10 ಹೆಣ್ಣು ಮಕ್ಕಳಿಗೆ ರೋಟರಿ ಕ್ಲಬ್ ಕುಂದಾಪುರ ಸನ್ ರೈಸ್ ಇವರ ವತಿಯಿಂದ ಬೆಳ್ಳಿಯ ನೆನಪಿನ ಕಾಣಿಕೆಯನ್ನು ನೀಡಲಾಯಿತು.











