

ಶಿರ್ವ: ಸಂತ ಮೇರಿ ಮಹಾವಿದ್ಯಾಲಯ, ಶಿರ್ವ ಇದರ ರಾಷ್ಟ್ರೀಯ ಭೂ-ಯುವಸೇನಾದಳದ ಎನ್.ಸಿ.ಸಿ. ಘಟಕ ಮತ್ತು 21 ಕರ್ನಾಟಕ ಬೆಟಾಲಿಯನ್ ಎನ್.ಸಿ.ಸಿ. ಉಡುಪಿ ಜಂಟಿಯಾಗಿ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಪ್ರಯುಕ್ತ “ವಿಶ್ವ ಯೋಗ ದಿನಾಚರಣೆ ಯನ್ನು” ಫಾದರ್ ಹೆನ್ರಿ ಕ್ಯಾಸ್ಟಲಿನೋ ಸಭಾಂಗಣದಲ್ಲಿ ಆಯುಷ್ ಮಂತ್ರಾಲಯ ನೀಡಿದ ಯೋಗ ವಿಡಿಯೋ ಪ್ರಾಯೋಗಿಕ ಪ್ರದರ್ಶನವನ್ನು ಅನುಸರಿಸಿ ಆಚರಿಸಲಾಯಿತು .
ಇಂದಿನ ಬಿಡುವಿಲ್ಲದ ಜೀವನದಲ್ಲಿ ಯುವಕರು ಯೋಗದತ್ತ ಗಮನಹರಿಸಬೇಕು, ಆರೋಗ್ಯಕರ ಮನಸ್ಸು ಮತ್ತು ದೇಹವನ್ನು ಕಾಪಾಡಿಕೊಳ್ಳಲು ಯೋಗ ಮುಖ್ಯವಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ! ಹೆರಾಲ್ಡ್ ಐವನ್ ಮೋನಿಸ್ ರವರು ಅಧ್ಯಕ್ಷ ನೆಲೆಯಲ್ಲಿ ಮಾತನಾಡಿ ಇಂತಹ ಕಾರ್ಯಕ್ರಮ ಹಮ್ಮಿಕೊಂಡ ಕಾಲೇಜಿನ ಎನ್.ಸಿ.ಸಿ ಘಟಕವನ್ನು ಪ್ರಶಂಸಿದರು ಮತ್ತು ಶುಭ ಹಾರೈಸಿದರು.ಕಾಲೇಜಿನ ಎನ್.ಸಿ.ಸಿ ಅಧಿಕಾರಿ ಲೆಫ್ಟಿನೆಂಟ್ ಕೆ ಪ್ರವೀಣ್ ಕುಮಾರ್ ಅವರು ಕಾರ್ಯಕ್ರಮಕ್ಕೆ ಮಾರ್ಗದರ್ಶನ ನೀಡಿದರು.
ಯೋಗವು ಮೂಲಭೂತವಾಗಿ ಭಾರತದ ಉಪಖಂಡದಲ್ಲಿ ಹುಟ್ಟಿಕೊಂಡಿತು. ಪ್ರಾಚೀನ ಕಾಲದಿಂದಲೂ ಯೋಗವನ್ನು ಯೋಗಿಗಳು ನಿರ್ವಹಿಸುತ್ತಾರೆ. ಯೋಗದ ಪದದ ಅರ್ಥ ಒಕ್ಕೂಟ ಮತ್ತು ಶಿಸ್ತು ಎಂದು ಸಂಸ್ಕೃತದಿಂದ ಅನುವಾದಿಸುತ್ತದೆ. ಯೋಗವು ಜೀವನದಲ್ಲಿ ಹೊಸ ಶಕ್ತಿಯನ್ನು ತುಂಬುತ್ತದೆ. ಹೀಗಾಗಿ ಸಾಮಾನ್ಯ ಜನರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ ಯೋಗದ ಬಗ್ಗೆ ತಮ್ಮ ಆಸಕ್ತಿಯನ್ನು ವ್ಯಕ್ತಪಡಿಸುತ್ತಾರೆ ಎಂದು ಕ್ಯಾಡೆಟ್ ಆಶಿಕಾ ತಿಳಿಸಿ, ವಿಶ್ವ ಯೋಗ ದಿನಾಚರಣೆಯ ಪ್ರಾಮುಖ್ಯತೆಯನ್ನು ಮತ್ತು ಉದ್ದೇಶವನ್ನು ಪ್ರಾಸ್ತವಿಕವಾಗಿ ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ಲ್ಲ್ಯಾನ್ಸ್ ಕಾರ್ಪೊರಲ್ ಅನೀಶ್ ಭಟ್ ಮತ್ತು ಕೆಡೆಟ್ಗಳು ಉಪಸ್ಥಿತರಿದ್ದರು.ಕ್ಯಾಡೆಟ್ಗಳಾದ ಅನುಪ್ ನಾಯಕ ಹಾಗೂ ಅಲಿಸ್ಟರ್ ಸುಜಾಯ್ ಡಿಸೋಜಾ ಸಹಕರಿಸಿದರು. ಲ್ಲ್ಯಾನ್ಸ್ ಕಾರ್ಪೊರಲ್ ಶೆಟ್ಟಿಗಾರ್ ಹೇಮಾಶ್ರೀ ಸುದರ್ಶನ್ ಸ್ವಾಗತಿಸಿ , ಕೆಡೆಟ್ ಕೃತಿಕಾ ವಂದಿಸಿದರು. ಕೆಡೆಟ್ ಸೋನಾಲಿ ಕುಲಾಲ್ ಕಾರ್ಯಕ್ರಮವನ್ನು ನಿರೂಪಿಸಿದರು.











