ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ
ಕೋಲಾರ : ರಾಷ್ಟ್ರೀಯ ಹೆದ್ದಾರಿಗಳು , ರಾಜ್ಯ ಹೆದ್ದಾರಿಗಳು ಹಾಗೂ ಇತರೆ ರಸ್ತೆಗಳಲ್ಲಿ ಅಗತ್ಯ ರಸ್ತೆ ಸುರಕ್ಷತಾ ಕ್ರಮಗಳನ್ನು ಕೈಗೊಂಡು ಅಪಘಾತಗಳನ್ನು ತಪ್ಪಿಸಬೇಕು ಎಂದು ಕೋಲಾರ ಲೋಕಸಭಾ ಕ್ಷೇತ್ರದ ಸಂಸದರಾದ ಎಸ್.ಮುನಿಸ್ವಾಮಿ ಅವರು ತಿಳಿಸಿದರು . ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ , 32 ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು . ಕೋಲಾರ ಜಿಲ್ಲೆಯಲ್ಲಿ ಬ್ಲಾಕ್ ಸ್ಪಾಟ್‌ಗಳಲ್ಲಿ ಅಗತ್ಸುರಕ್ಷತಾ ಕ್ರಮಗಳನ್ನು ಅಳವಡಿಸುವ ಬಗ್ಗೆ ಸೂಚನೆ ನೀಡಲಾಗಿತ್ತು ಆದರೆ ಇದುವರೆಗೆ ಶೇ . 50 ರಷ್ಟು ಕೆಲಸವಾಗಿಲ್ಲ . ಕೇಂದ್ರ ಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಇವರು ರಸ್ತೆ ಸುರಕ್ಷತಾ ಕಾಮಗಾರಿಗಳ ಬಗ್ಗೆ ಕ್ರಮ ಕೈಗೊಂಡಿದ್ದು , ಪ್ರಸ್ತುತ ರಸ್ತೆ ಅಪಘಾತಗಳು ಕಡಿಮೆ ಆಗಿವೆ . ತಮಿಳುನಾಡಿನಲ್ಲಿ ರಸ್ತೆ ಅಪಘಾತಗಳು ಕಡಿಮೆ ಆಗುತ್ತವೆ ಕಾರಣ ಸೂಕ್ತ ರಸ್ತೆ ಸುರಕ್ಷತಾ ಕ್ರಮಗಳನ್ನು ಕೈಗೊಂಡಿರುತ್ತಾರೆ ಎಂದು ಮಾಹಿತಿ ನೀಡಿದರು . ಕೋಲಾರದಲ್ಲಿ ರಸ್ತೆ ಅಗಲೀಕರಣ ಮಾಡಲು ದೇವಸ್ಥಾನ , ಮಸೀದಿ , ಮಂದಿರಗಳನ್ನು ತೆರವುಗೊಳಿಸಲಾಗಿದೆ . ಕೋಲಾರದ ಎನ್‌ಹೆಚ್ 75 ನಲ್ಲಿ 42 ಬ್ಲಾಕ್ ಸ್ಪಾಟ್‌ಗಳನ್ನು ಗುರುತಿಸಲಾಗಿದೆ . ಮುಳಬಾಗಿಲಿನ ಕಾಂತರಾಜ ಸರ್ಕಲ್ ಬಳಿ ಹೆಚ್ಚಿನ ಅಪಘಾತಗಳಾಗುತ್ತವೆ . ಜಿಲ್ಲೆಯ ಅಕ್ಸಿಡೆಂಟ್ ಜೋನ್‌ಗಳಲ್ಲಿ ಸೂಕ್ತ ಅಂಬುಲೆನ್ಸ್ ವ್ಯವಸ್ಥೆಯನ್ನು ಮಾಡಬೇಕು . ರಸ್ತೆ ಬದಿಯಲ್ಲಿ ಕಸ ವಿಲೇವಾರಿ ಮಾಡುವುದು , ಹಳೆಯ ವಾಹನಗಳನ್ನು ನಿಲ್ಲಿಸುವುದು , ಹೋಟೆಲ್‌ಗಳ ಕಸವನ್ನು ಸುರಿಯುವುದು , ರಸ್ತೆಗಳನ್ನು ಅತಿಕ್ರಮಿಸುವುದು ಇಂತಹ ಅನೇಕ ಮಾನವ ತಪ್ಪುಗಳಿಂದಲೇ ಅಪಘಾತಗಳು ಆಗುತ್ತಿವೆ . ಆರ್‌ಟಿಒ ಇಲಾಖೆಯವರು ಎಫ್ಸಿ ಮಾಡಿ ಪರವಾನಗಿ ನೀಡುವಾಗ ವಾಹನದ ಗುಣಮಟ್ಟವನ್ನು ಪರಿಶೀಲಿಸಿ ನೀಡಬೇಕು . ಶಾಲೆಗಳ ಬಳಿ , ಅಪಘಾತ ವಲಯಗಳ ಬಳಿ , ತಿರುವುಗಳಲ್ಲಿ ಸೂಚನ ಫಲಕಗಳನ್ನು ಅಳವಡಿಸಬೇಕು . ಅಪಘಾತ ಸಂದರ್ಭದಲ್ಲಿ ತುರ್ತು ಸೇವೆಗಾಗಿ ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆಗಳನ್ನು ಸೂಚನಾ ಫಲಕದಲ್ಲಿ ಪ್ರದರ್ಶಿಸಬೇಕು ಎಂದು ಸೂಚಿಸಿದರು . ಶಾಲಾ ಕಾಲೇಜುಗಳು ಪ್ರಾರಂಭವಾಗಿದ್ದು , ಕೆ.ಎಸ್.ಆರ್.ಟಿ.ಸಿ ಬಸ್ಟ್ಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಚಾಲನೆ ಮಾಡಬೇಕು . ಅಪಘಾತ ಪ್ರಕರಣಗಳಲ್ಲಿ ಅಪಘಾತವಾದವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಬೇಕು . ದಾಖಲಿಸಿದವರಿಗೆ ಯಾವುದೇ ಪೊಲೀಸ್ ವಿಚಾರಣೆ ಇರುವುದಿಲ್ಲ ಎಂಬ ಮಾಹಿತಿಯನ್ನು ಸಾರ್ವಜನಿಕರಿಗೆ ನೀಡಬೇಕು . 2014 ರಿಂದ 2021 ರವರೆಗೆ ಹೋಲಿಕೆ ಮಾಡಿದರೆ ರಸ್ತೆ ಅಪಘಾತ ಪ್ರಕರಣಗಳು ಕಡಿಮೆ ಆಗುತ್ತಿವೆ . ಅಪಘಾತ ಪ್ರಕರಣಗಳಲ್ಲಿ ಆಸ್ಪತ್ರೆಗಳಲ್ಲಿ ತಕ್ಷಣ ಚಿಕಿತ್ಸೆ ನೀಡಬೇಕು . ಪೊಲೀಸ್ ಪ್ರಕರಣ ದಾಖಲಿಸಬೇಕು ಎಂದು ಸತಾಯಿಸುವಂತಿಲ್ಲ . ಚಾಲಕರು ರಸ್ತೆ ನಿಯಮಗಳನ್ನು ಹಾಗೂ ಸಂಚಾರ ಚಿಹ್ನೆಗಳನ್ನು ಚೆನ್ನಾಗಿ ಅರಿವುಮೂಡಿಸಬೇಕು . ಸ್ವಲ್ಪವೂ ಬೇಜವಾಬ್ದಾರಿ ಅಥವಾ ನಿರ್ಲಕ್ಷತೆ ತೋರದೆ ನಿಯಮ ಪಾಲನೆ ಮಾಡಬೇಕು . ಸಂಚಾರ ನಿಯಮಗಳನ್ನು ಪಾಲನೆ ಮಾಡಿದರೆ ಸಾಕಷ್ಟು ಅಪಘಾತಗಳನ್ನು ತಡೆಗಟ್ಟಬಹುದು ಎಂದು ತಿಳಿಸಿದರು . ಜಿಲ್ಲಾಧಿಕಾರಿಗಳಾದ ಡಾ || ಆರ್ . ಆರ್.ಸೆಲ್ವಮಣಿ ಅವರು ಮಾತನಾಡಿ , ಜಿಲ್ಲಾ ಆಸ್ಪತ್ರೆಗಳಲ್ಲಿ ಎಮರ್ಜೆನ್ಸಿ ವಾರ್ಡ್‌ನಲ್ಲಿ 20 ಬೆಡ್‌ಗಳ ಅವಶ್ಯಕತೆ ಇರುತ್ತದೆ . ಜಿಲ್ಲಾ ಆಸ್ಪತ್ರೆಯಲ್ಲಿ 5 ಬೆಡ್‌ಗಳಿದ್ದು ಈ ಬೆಗ್ಗೆ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಂಡು ಬೆಡ್‌ಗಳ ಸಂಖ್ಯೆಯನ್ನು ಹೆಚ್ಚಿಸಲು ಕ್ರಮ ವಹಿಸಲಾಗುವುದು . ಅಪಘಾತ ಪ್ರಕರಣಗಳಲ್ಲಿ ಖಾಸಗಿ ಆಸ್ಪತ್ರೆಗಳು ಚಿಕಿತ್ಸೆ ನೀಡುವುದಕ್ಕೆ ಹಿಂದೇಟು ಹಾಕುವುದು , ಡೆಪಾಸಿಟ್ ಕಟ್ಟಲು ಒತ್ತಾಯಿಸುವುದು ಕಂಡು ಬಂದಾರೆ ಕೆಪಿಎಂಇ ಕಾಯ್ದೆ ಪ್ರಕಾರ ಶಿಸ್ತು ಕ್ರಮ ಕೈಗೊಳ್ಳಲಾಗುವುದು . ಅಪಘಾತ ಪ್ರಕರಣಗಳಿಗೆ ಎಬಿಆರ್‌ಕೆ ಅಡಿ ಉಚಿತ ಚಿಕಿತ್ಸೆ ನೀಡಬೇಕು . ವಾಹನ ಸವಾರರು ತಮ್ಮ ಪ್ರಾಣ ರಕ್ಷಣೆಗಾಗಿ ರಸ್ತೆ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ತಿಳಿಸಿದರು . ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಕಾರ್ತಿಕ್ ರೆಡ್ಡಿ ಅವರು ಮಾತನಾಡಿ , ಸಾಯಿ ಗಾರ್ಮೆಂಟ್‌ನಲ್ಲಿ 5 ರಿಂದ 6 ಸಾವಿರ ಮಹಿಳೆಯರು ಕೆಲಸ ಮಾಡುತ್ತಾರೆ . ಗಾರ್ಮೆಟ್ನ ಕೆಲಸ ಅವಧಿ ಮುಗಿದ ನಂತರ ಆಟೋಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಸುತ್ತಾರೆ . ಇದರಿಂದ ಅಪಘಾತಗಳು ಉಂಟಾಗುವ ಸಂಭವವಿದೆ . ಕೋಲಾರ ಜಿಲ್ಲೆಯಲ್ಲಿ ಸರಾಸರಿ 40 ಶೋರೂಂಗಳಿವೆ ಇಲ್ಲಿ ವಾಹನ ಖರೀದಿಸಿ ನೊಂದಣಿ ಮಾಡಿಸಿಕೊಳ್ಳದ ವಾಹನಗಳ ಪಟ್ಟಿಯನ್ನು ಗುರುತಿಸಿ ನೋಟಿಸ್ ನೀಡಬೇಕು , ಪ್ರತಿಯೊಬ್ಬರು ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸುವ ಮೂಲಕ ಕಾನೂನಿಗೆ ಗೌರವ ನೀಡಬೇಕು . ವಾಹನ ಸವಾರರು ಸುರಕ್ಷತೆ ಮತ್ತು ಜಾಗೃತರಾಗಿ ವಾಹನ ಚಲಾಯಿಸಬೇಕು . ಜತೆಗೆ ವಾಹನಕ್ಕೆ ಅಗತ್ಯವಾದ ವಿಮೆ , ಚಾಲನಾ ಪರವಾನಗಿ ಹಾಗೂ ನೋಂದಣಿಯನ್ನು ಕಡ್ಡಾಯವಾಗಿ ಮಾಡಿಸಬೇಕು ಎಂದು ತಿಳಿಸಿದರು . ಕಾರ್ಯಕ್ರಮದಲ್ಲಿ ಪಂಚಾಯತ್ನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ಎನ್.ಎಂ.ನಾಗರಾಜ್ , ಕೆ.ಜಿ.ಎಫ್ ಪೊಲೀಸ್ ವರಿಷ್ಠಾಧಿಕಾರಿಗಳಾದ ಇಲಕ್ಕಿಯಾ ಕರುಣಾಕರನ್ , ಸಾರಿಗೆ ಇಲಾಖೆಯ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು .ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ