ಮೂಡ್ಲಕಟ್ಟೆ ಐ ಎಂ ಜೆ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ರೆಡ್ ಕ್ರಾಸ್ ಘಟಕ ಮತ್ತು ಭಾರತೀಯ ರೆಡ್ ಕ್ರಾಸ್ ಘಟಕ ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ ರಾಷ್ಟ್ರೀಯ ಏಕತಾ ದಿನಾಚರಣೆಯ ಅಂಗವಾಗಿ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಭಾರತೀಯ ರೆಡ್ ಕ್ರಾಸ್ ಘಟಕ ಕುಂದಾಪುರ ಇದರ ಅಧ್ಯಕ್ಷರಾದ ಜಯಕರ ಶೆಟ್ಟಿ ಅವರು ಉದ್ಘಾಟಿಸಿ ಶುಭಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷರಾದ, ಐ ಎಂ ಜೆ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಂಶುಪಾಲೇಯವರಾದ ಡಾII ಪ್ರತಿಭಾ ಎಂ ಪಟೇಲ್ ಅವರು ತಮ್ಮ ಅಧ್ಯಕ್ಷಿಯ ಭಾಷಣದಲ್ಲಿ ರಾಷ್ಟೀಯ ಏಕತಾ ದಿನಾಚರಣೆಯ ಮಹತ್ವವನ್ನು ತಿಳಿಸಿದರು. ದೇಶದ ಏಕತೆಗಾಗಿ ಶ್ರಮಿಸಿದ ಸರ್ದಾರ್ ವಲ್ಲಭಾಯಿ ಪಟೇಲ್ ಅವರ ಕೊಡುಗೆಯನ್ನು ಸ್ಮರಿಸಲಾಯಿತು. ಸದ್ರಡ ದೇಶವನ್ನು ಕಟ್ಟುವ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಪಾತ್ರವನ್ನು ತಿಳಿಸಿದರು ಈ ನಿಟ್ಟಿನಲ್ಲಿ ರಾಷ್ಟೀಯ ಏಕತಾ ದಿನಾಚರಯನ್ನು ಅರ್ಥಪೂರ್ಣವಾಗಿ ಆಚರಿಸುವ ಉದ್ದೇಶದಿಂದ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ವಿವರಿಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ರಾಷ್ಟೀಯ ಏಕತಾ ದಿನಾಚರಣೆಯ ಪ್ರತಿಜ್ಞೆಯನ್ನು ಬೋಧಿಸಲಾಯಿತು. ವಿದ್ಯಾರ್ಥಿಗಳು ಸ್ವಯಂ ಪ್ರೇರಿತರಾಗಿ ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡರು. ಕಾರ್ಯಕ್ರಮದಲ್ಲಿ ಉಪಾಪ್ರಾಂಶುಪಾಲರಾದ ಪ್ರೊ ಜಯಶೀಲ ಕುಮಾರ್, ರೆಡ್ ಕ್ರಾಸ್ ಘಟಕದ ಸಂಯೋಜಕಿ ಹಾಗು ವಾಣಿಜ್ಯ ಉಪನ್ಯಾಸಕಿ ಅಸಿಸ್ಟೆಂಟ್ ಪ್ರೊಫೆಸರ್ ಶಬೀನ ಎಚ್. ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಕನ್ನಡ ವಿಭಾಗದ ಉಪನ್ಯಾಸಕಿ ಅಸಿಸ್ಟೆಂಟ್ ಪ್ರೊಫೆಸರ್ ಸುಮನಾ ನಿರೂಪಿಸಿದರು.