ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ
ಶ್ರೀನಿವಾಸಪುರ: ಪುರಸಭೆ ಮುಖ್ಯಾಧಿಕಾರಿ ಕೊಳೆತು ನಾರುತ್ತಿರುವ ಮಾವಿನ ಮಂಡಿ ಪ್ರದೇಶದ ಸ್ವಚ್ಛತೆಗೆ ಅಗತ್ಯ ಗಮನ ನೀಡಬೇಕು. ಅಲ್ಲಿ ಉಂಟಾಗಿರುವ ಅನಾರೋಗ್ಯ ಪರಿಸರವನ್ನು ಸರಿಪಡಿಸಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಅವರು ಸೂಚಿಸಿದರು.
ಪಟ್ಟಣದಲ್ಲಿ ಬುಧವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಸರ್ಕಾರ ಹಾಗೂ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ, ತಾಲ್ಲೂಕಿನ ಕಾರ್ಮಿಕರಿಗೆ ದಿನಸಿ ಹಾಗೂ ಸುರಕ್ಷಾ ಕಿಟ್ ವಿತರಿಸಿ ಮಾತನಾಡಿ, ಕೋವಿಡ್ ಸಂದರ್ಭದಲ್ಲಿ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರಿಗೆ ಅಗತ್ಯವಾದ ನೆರವು ನೀಡಲಾಗುವುದು ಎಂದು ಹೇಳಿದರು.
ಮಾರುಕmಯಲ್ಲಿ ಕೋವಿಡ್ ನಿಯಮ ಪಾಲನೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಮಾವು ಖರೀದಿಗೆ ದೇಶದ ವಿವಿಧ ರಾಜ್ಯಗಳಿಂದ ವ್ಯಾಪಾರಿಗಳು, ಮತ್ತಿತರರು ಬರುತ್ತಾರೆ. ಅವರ ಬಗ್ಗೆಯೂ ಎಚ್ಚರಿಕೆ ವಹಿಸಬೇಕು ಎಂದು ಸಲಹೆ ಮಾಡಿದರು.
ತಾಲ್ಲೂಕಿನಲ್ಲಿ ವಿದ್ಯಾರ್ಥಿ ನಿಲಯಗಳಿಗೆ ಅಗತ್ಯವಾದ ಮೂಲ ಸೌಕರ್ಯ ಕಲ್ಪಿಸಲಾಗುವುದು. ಪಟ್ಟಣದ ವಿವಿಧ ಬಡಾವಣೆಗಳ ಬಡವರಿಗೆ ಮನೆ ನಿವೇಶನ ನೀಡಲಾಗುವುದು. ಪಟ್ಟಣದಲ್ಲಿ ರಸ್ತೆ ನಿರ್ಮಾಣ ಹಾಗೂ ದುರಸ್ತಿಗೆ ಗಮನ ನೀಡಲಾಗುವುದುಎಂದು ಹೇಳಿದರು.
ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಆನಂದ್, ಪುರಸಭಾಧ್ಯಕ್ಷೆ ಲಲಿತಾ ಶ್ರೀನಿವಾಸ್, ಮುಖ್ಯಾಧಿಕಾರಿ ಸತ್ಯನಾರಾಯಣ ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ದಿಂಬಾಲ ಅಶೋಕ್, ಮುಖಂಡರಾದ ಕೆ.ಕೆ.ಮಂಜುನಾಥರೆಡ್ಡಿ, ಅಧಿಕಾರಿ ಆಶಾರಾಣಿ, ಮಾಜಿ ಅಧ್ಯಕ್ಷ ಶ್ರೀನಿವಾಸ್ ಇತರರು ಇದ್ದರು.