ಗ್ರಾಮೀಣ ಪ್ರದೇಶದಲ್ಲಿ ಆದ್ಯತೆ ಮೇಲೆ ಅಗತ್ಯ ಮೂಲ ಸೌಕರ್ಯ ಕಲ್ಪಿಸಲಾಗಿದೆ. ಅದರಲ್ಲೂ ಕುಡಿಯುವ ನೀರು ಪೂರೈಕೆಗೆ ಮೊದಲ ಆದ್ಯತೆ ನೀಡಲಾಗಿದೆ:ಶಾಸಕ ಕೆ.ಅರ್.ರಮೇಶ್ ಕುಮಾರ್

ಶ್ರೀನಿವಾಸಪುರ: ಗ್ರಾಮೀಣ ಪ್ರದೇಶದಲ್ಲಿ ಆದ್ಯತೆ ಮೇಲೆ ಅಗತ್ಯ ಮೂಲ ಸೌಕರ್ಯ ಕಲ್ಪಿಸಲಾಗಿದೆ. ಅದರಲ್ಲೂ ಕುಡಿಯುವ ನೀರು ಪೂರೈಕೆಗೆ ಮೊದಲ ಆದ್ಯತೆ ನೀಡಲಾಗಿದೆ ಎಂದು ಶಾಸಕ ಕೆ.ಅರ್.ರಮೇಶ್ ಕುಮಾರ್ ಹೇಳಿದರು.
ತಾಲ್ಲೂಕಿನ ಶಿವಪುರ ಗ್ರಾಮದಲ್ಲಿ ರೂ.5 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗುವ ಸಮುದಾಯ ಭವನಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಕೆಸಿ ವ್ಯಾಲಿ ನೀರು ತಾಲ್ಲೂಕಿನ ಕೆರೆಗಳಿಗೆ ಹರಿದು ಬರುತ್ತಿದೆ. ಹೊಸದಾಗಿ ಕೆಲವು ಕೆರೆಗಳಿಗೆ ಕೊಳವೆ ಅಳವಡಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಹೇಳಿದರು.
ಕ್ಷೇತ್ರದಲ್ಲಿ ವಸತಿ ಹೀನರಿಗೆ ಮನೆ ನಿರ್ಮಿಸಿ ಕೊಡಲಾಗಿದೆ. ಕೆಲವು ಕಡೆ ನಿರ್ಮಾಣ ಹಂತದಲ್ಲಿವೆ. ಹೊಸದಾಗಿ 4 ಸಾವಿರ ಮನೆಗಳನ್ನು ಮಂಜೂರು ಮಾಡಿಸಲಾಗಿದೆ. ರಸ್ತೆ, ಚರಂಡಿ, ಸಿಸಿ ರಸ್ತೆ ನಿರ್ಮಾಣ ಮಾಡಲಾಗಿದೆ. ಅಗತ್ಯ ಇರುವೆಡೆಗಳಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ತೆರೆಯಲಾಗಿದೆ ಎಂದು ಹೇಳಿದರು.
ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷ ದಿಂಬಾಲ ಅಶೋಕ್, ಮುಖಂಡರಾದ ಕೆ.ಕೆ.ಮಂಜು, ಗೋಪಾಲರೆಡ್ಡಿ, ಅಯ್ಯಪ್ಪ, ಎಸ್‍ಜಿವಿ ವೆಂಕಟೇಶ್, ಎಸ್.ಜಿ.ಜಗದೀಶ್, ಜಿ.ಗುರ್ರಪ್ಪ, ಬಿ.ಗುರ್ರಪ್ಪ, ಪ್ರಸಾದ್, ಶಿವಪ್ಪ, ಶ್ರೀನಿವಾಸ್ ರಾಜೇಂದ್ರ ಕುಮಾರ್ ಇದ್ದರು
.