ಕಲ್ಲೂರು ಗ್ರಾಮದ ಸಮೀಪ ರೂ.15 ಕೋಟಿ ವೆಚ್ಚದಲ್ಲಿ ನೂತನ ನ್ಯಾಯಾಲಯ ಕಟ್ಟಡ ನಿರ್ಮಿಸಲಾಗುವುದು : ನ್ಯಾಯಾಧೀಶ ಬಿ.ವೀರಪ್ಪರೆಡ್ಡಿ

ವರದಿ:ಶಬ್ಬೀರ್ಅಹಮ್ಮದ್,ಶ್ರೀನಿವಾಸಪುರ

ಶ್ರೀನಿವಾಸಪುರ ; ತಾಲ್ಲೂಕಿನ ಕಲ್ಲೂರು ಗ್ರಾಮದ ಸಮೀಪ ರೂ.15 ಕೋಟಿ ವೆಚ್ಚದಲ್ಲಿ ನೂತನ ನ್ಯಾಯಾಲಯ ಕಟ್ಟಡ ನಿರ್ಮಿಸಲಾಗುವುದು ಎಂದು ಹೈಕೋರ್ಟ್ ನ್ಯಾಯಾಧೀಶ ಬಿ.ವೀರಪ್ಪರೆಡ್ಡಿ ಹೇಳಿದರು.
ಶನಿವಾರ ಪಟ್ಟಣದ ಹೊರವಲಯದ ಕಲ್ಲೂರು ಗ್ರಾಮದ ಸಮೀಪ ನಿರ್ಮಿಸಲಾಗುವ ನೂತನ ನ್ಯಾಯಾಲಯ ಕಟ್ಟಡದ ಸ್ಥಳ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಕಟ್ಟಡ ನಿರ್ಮಾಣಕ್ಕೆ ರೂ.15 ಕೋಟಿ ಮಂಜೂರಾಗಿದೆ. ಸಧ್ಯದಲ್ಲಿಯೇ ಕಟ್ಟಡ ನಿರ್ಮಾಣ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಹೇಳಿದರು.
ನ್ಯಾಯಾಲಯದಲ್ಲಿರು ಹಳೆ ಪ್ರಕರಣಗಳನ್ನು ಇತ್ಯರ್ಥಪಡಿಸಲು ವಕೀಲರು ಸಹಕರಿಸಬೇಕು. ಸಾರ್ವಜನಿಕರಲ್ಲಿ ನ್ಯಾಯಾಲಯದ ಬಗ್ಗೆ ಗೌರವ ಭಾವನೆಯಿದೆ. ನ್ಯಾಯ ದೇಗುಲ ಎಂದು ಭಾವಿಸಲಾಗುತ್ತಿದೆ. ಅವರ ನಂಬಿಕೆ ಹುಸಿಯಾಗದಂತೆ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ಜಿಲ್ಲಾ ಆಡಳಿತ ನ್ಯಾಯಾಧೀಶ ಆರ್.ದೇವರಾಜ್, ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕೆ.ಆರ್.ನಾಗರಾಜು, ಪ್ರಧಾನ ಸಿವಿಲ್ ನ್ಯಾಯಾಧೀಶ
ಎಚ್.ಆರ್.ದೇವರಾಜ್, ಅಪರ ಸಿವಿಲ್ ನ್ಯಾಯಾಧೀಶ ನಾಗೇಶ್ ನಾಯಕ್, ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಎಂ.ಕೆ.ಹುಸೇನ್ ಸಾಬ್, ವಕೀಲರ ಸಂಘದ ಅಧ್ಯಕ್ಷ ಕೆ.ಶಿವಪ್ಪ, ಮಾಜಿ ಅಧ್ಯಕ್ಷರಾದ ಟಿ.ವೆಂಕಟೇಶ್, ರಾಜಗೋಪಾಲರೆಡ್ಡಿ, ಕಾರ್ಯದರ್ಶಿ ರೂಪಾ, ವಕೀಲರಾದ ಅರ್ಉನ್, ಮುರಳೀಧರ್, ಮುರಳಿ, ಮಂಜುನಾಥ್, ನಿನಯ್ ಕುಮಾರ್, ಶ್ರೀನಿವಾಸಮೂರ್ತಿ ಇದ್ದರು.