ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ
ಶ್ರೀನಿವಾಸಪುರ ಕೆಎಸ್ಆರ್ಟಿಸಿ ಬಸ್ ಸ್ಟ್ಯಾಂಡ್ ಕಟ್ಟಡದ ಮೇಲೆ ನೂತನವಾಗಿ ರೈತರ ಮಾಲ್ ನಿರ್ಮಾಣಕ್ಕೆ ಶಾಸಕ ಕೆ.ಆರ್.ರಮೇಶ್ಕುಮಾರ್ರವರು ಸೋಮವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು.
ಸಭೆಯಲ್ಲಿ ಶಾಸಕ ಕೆ.ಆರ್.ರಮೇಶ್ಕುಮಾರ್ ತಾಲೂಕಿನ ಕೃಷಿ ಅಧಿಕಾರಿಗಳನ್ನು ಹಾಗೂ ಕೆಎಸ್ಆರ್ಟಿಸಿ ಅಧಿಕಾರಿಗಳನ್ನು ಒಳಗೊಂಡಂತೆ ಎಲ್ಲರನ್ನೂ ಸೇರಿಸಿ ಸಭೆಯನ್ನು ಮಾಡಿದರು. ಈ ಸಭೆಯಲ್ಲಿ ಶಾಸಕರು ತಾಲೂಕಿನ ಎಲ್ಲ ರೈತರಿಗೂ ಕೃಷಿ ಉಪಕರಣಗಳು ಹಾಗೂ ಸಬ್ಸಿಡಿಯಲ್ಲಿ ಬಿತ್ತನೆ ಬೀಜಗಳು ಯಾಂತ್ರಿಕ ಉಪಕರಣಗಳು ಹಾಗೂ ಎಲ್ಲಾ ರೀತಿಯ ಕೃಷಿ ಆಧಾರಿತ ಉಪಕರಣಗಳನ್ನು ರೈತರು ಪಡೆಯಲು ಅನುಕೂಲವಾಗುವಂತೆ ಮಾಲ್ನ್ನು ನಿರ್ಮಿಸಲು ತಿಳಿಸಿದರು.
ಈ ವೇಳೆ ರೈತರಿಗೆ ಡಿಸಿಸಿ ಬ್ಯಾಂಕ್ ವತಿಯಿಂದ ಕ್ರೆಡಿಟ್ ಕಾರ್ಡ್ಗಳನ್ನು ವಿತರಿಸಿ, ಈ ಕ್ರೆಡಿಟ್ ಕಾರ್ಡ್ ಎಲ್ಲಾ ರೀತಿಯ ವ್ಯವಹಾರಗಳನ್ನು ನಡೆಸಲು ಅನುವು ಮಾಡಿಕೊಡಲಾಗುವುದು. ರೈತರು ಕೃಷಿಗೆ ಬೇಕಾದ ಬಿತ್ತನೆ ಬೀಜ ಹಾಗೂ ಯಾಂತ್ರಿಕ ಉಪಕರಣಗಳನ್ನು ಈ ರೀತಿ ಖರೀದಿಸಿದರೆ ರೈತರಿಗೆ ಅನುಕೂಲವಾಗುತ್ತದೆ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ತಿಳಿಸಿದರು.
ಈ ವೇಳೆ ಜಿ.ಪಂ.ಮಾಜಿ ಅಧ್ಯಕ್ಷ ಎಂ.ಶ್ರೀನಿವಾಸನ್, ಕೋಚಿಮುಲ್ ಮಾಜಿ ಅಧ್ಯಕ್ಷ ಎಂ.ಜಿ.ಬ್ಯಾಟಪ್ಪ, ಮುಖಂಡರಾದ ವೈ.ಆರ್.ರಾಮಾನುಜಚಾರ್ಯ, ದಿಂಬಾಲ್ ವೆಂಕಟಾದ್ರಿ, ಸಿಬ್ಬಂದಿ ಮಂಜುನಾಥ್, ಪುರಸಭೆ ಮುಖ್ಯ ಅಧಿಕಾರಿ ಸತ್ಯನಾರಾಯಣ ಇತರರು ಇದ್ದರು.