

ಜೆಸಿಐ ಕುಂದಾಪುರ ಸಿಟಿ ಘಟಕದ ಆಶ್ರಯದಲ್ಲಿ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ಎಂಬ ಕಾರ್ಯಕ್ರಮದಲ್ಲಿ ಎಲೆಮರೆಯ ಸಾಧಕರನ್ನು ಗೌರವಿಸುವ ಕಾರ್ಯಕ್ರಮವನ್ನು ಕುಂದಾಪುರದ ಸುಮುಖ ಮಿನಿ ಹಾಲಿನಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ತಿಂಗಳ ಮೌನ ಸಾಧಕರಾಗಿ ಕುಂದಾಪುರದ ಶ್ರೀ ರಾಮಕೃಷ್ಣ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಸೇವೆ ಸಲ್ಲಿಸುತ್ತಿರುವ ಶ್ರೀಮತಿ ರಾಧಿಕಾ ರವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದ ವೇದಿಕೆಯಲ್ಲಿ ಪೂರ್ವ ವಲಯ ಅಧ್ಯಕ್ಷರಾದ ಕಾರ್ತಿಕೇಯ ಮಧ್ಯಸ್ಥ, ವಲಯ ಉಪಾಧ್ಯಕ್ಷರಾದ ಅಭಿಲಾಶ್ ಬಿ ಏ, ವಲಯದ ವಿವಿಧ ಘಟಕಗಳ ಘಟಕ ಅಧ್ಯಕ್ಷರುಗಳಾದ ಅನಿಲ್ ಕುಮಾರ್, ಜ್ಯೋತಿಶಂಕರ್, ಪ್ರದೀಪ್ ಶೆಟ್ಟಿ, ನಾಗೇಂದ್ರ ಪ್ರಭು ಉಪಸ್ಥಿತರಿದ್ದರು. ಘಟಕದ ಪೂರ್ವ ಅಧ್ಯಕ್ಷರುಗಳಾದ ಗಿರೀಶ್ ಹೆಬ್ಬಾರ್ ರಾಘವೇಂದ್ರ ನಾವಡ, ನಾಗೇಶ್ ನಾವಡ, ಮಂಜುನಾಥ ಕಾಮತ್, ಶ್ರೀಧರ್ ಸುವರ್ಣ, ವಿಜಯ್ ಭಂಡಾರಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ. ಸೋನಿ ಡಿಕೋಸ್ಟ ಅವರು ವಹಿಸಿದ್ದರು. ಪ್ರೇಮ ಡಿಕುನ್ನ ಧನ್ಯವಾದ ಸಮರ್ಪಿಸಿದರು.




