JANANUDI.COM NETWORK
ಇಂದು (4-12-21) ಕರ್ನಾಟಕದಲ್ಲಿ ಮಳೆ ಮುಂದುವರೆಯುತ್ತಿದ್ದು, ಇಂದಿನಿ0ದ ಮಳೆಯ ಜೊತೆಗೆ ನೆರೆಯ ರಾಜ್ಯವಾದ ಆಂಧ್ರ ಪ್ರದೇಶದಲ್ಲಿ ಚ0ಡಮಾರುತವೂ ಅಪ್ಪಳಿಸಲಿದೆ. ಆಂಧ್ರಪ್ರದೇಶದ ಜೊತೆಗೆ ಒಡಿಶಾ, ಪಶ್ಚಿಮ ಬಂಗಾಳದಲ್ಲೂ ಇ0ದು ಜವಾದ್ ಚ0ಡಮಾರುತ ಆರ್ಭಟಿಸಲಿದೆ. ಚಂಡಮಾರುತದ ಪರಿಣಾಮದಿ0ದ ಕರ್ನಾಟಕದ ಕರಾವಳಿ, ಮಲೆನಾಡಿನಲ್ಲಿ ಮಳೆ ಹೆಚ್ಚಾಗಲಿದೆ. ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನದಲ್ಲಿ ಮಳೆ ಸುರಿಯುತ್ತಿದೆ. ರಾಜ್ಯಾದ್ಯಂತ ಇಂದಿನಿಂದ ಡಿ.6 ರವರೆಗೆ ವರುಣನ ಆರ್ಭಟಿವಿರಲಿದೆ.
ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಮಳೆಯಿಂದ ಅಜ್ಮಂಪುರ ತಾಲೂಕಿನ ಶಿವನಿ ಕರೆ ತುಂಬಿ ಹರಿಯುತ್ತಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯಿ0ದ 845 ಕೋಟಿ ರೂ. ಹಾನಿಯಾಗಿದೆ. ಇ0ದು ಬೆ0ಗಳೂರು, ಮೈಸೂರು, ಚಿಕ್ಕಬಳ್ಳಾಪುರ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಧಾರವಾಡ, ಬಾಗಲಕೋಟಿ, ಗದಗ, ಹಾವೇರಿ, ಕಲಬುರ್ಗಿ, ವಿಜಯಪುರ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಯಲ್ಲಿ ಮಳೆಯಾಗಲಿದೆ ಹೀಗಾಗಿ ರಾಜ್ಯಾದ್ಯ0ತ ಮಳೆಯಾಗಲಿದೆ 3 ದಿನ ಎ0ದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜವಾದ್ ಚಂಡಮಾರುತದಿಂದಾಗಿ, ಪಶ್ಚಿಮ ಬಂಗಾಳದ ಪೂರ್ವ ಮತ್ತು ಶಶ್ವಿಮ ಮಿಡ್ನಾಪುರ ಜಿಲ್ಲೆಗಳಲ್ಲಿ ಇ0ದು ಭಾರೀ ಮಳೆಯಾಗಲಿದ್ದು. ಹಾಗೇ, ದೆಹಲಿ, ಗುಜರಾತ್ ಮತ್ತು ಮಹಾರಾಷ್ಟ್ರದ ವಿವಿಧ ಸ್ಥಳಗಳಲ್ಲಿ ಕೂಡ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಈ ಚ0ಡಮಾರುತಕ್ಕೆ ಈಗಾಗಲೇ ಜವಾದ್ ಎ0ದು ಹೆಸರಿಡಲಾಗಿದೆ. ಸೌದಿ ಅರೇಬಿಯಾದ ಪ್ರಕಾರ ಜವಾದ್ ಎ0ದರೆ ಅರೇಬಿಕ್ ಭಾμÉಯಲ್ಲಿ ಉದಾರ ಅಥವಾ ಕರುಣಾಮಯಿ ಎಂದರ್ಥ. ಭಾರತದಲ್ಲಿ ಇಂದಿನಿ0ದ ಜವಾದ್ ಚ0ಡಮಾರುತ ಅಪ್ಪಳಿಸುವುದರಿ0ದ ಉನ್ನತ ಅಧಿಕಾರಿಗಳ ಜೊತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸಭೆ ನಡೆಸಿದ್ದಾರೆ. ಈಗಾಗಲೇ ಒಡಿಶಾದ 14 ಜಿಲ್ಲೆಗಳ ಜನರನ್ನು ಸುರಕ್ಷಿತ ಸ್ಥಳಗಳಿಗೆ ತೆರವು ಮಾಡಲು ಸರ್ಕಾರ ಸೂಚಿಸಿದೆ. ಪಶ್ಚಿಮ-ವಾಯುವ್ಯಕ್ಕೆ ಚಲಿಸುವ ಮೊದಲು ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಉತ್ತಮವಾದ ಕಡಿಮೆ ಒತ್ತಡವನ್ನು. ಗಮನಿಸಲಾಗುವುದು. ಇ0ದು ಆಂಧ್ರಪ್ರದೇಶ, ಒಡಿಶಾ ಮತ್ತು ಪಶ್ಚಿಮ ಬಂಗಾಳದ ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಭಾರತೀಯ ಹವಾಮಾನ ಇಲಾಖೆ ಆ0ಧ್ರ ಪ್ರದೇಶ ಮತ್ತು ಒಡಿಶಾದಲ್ಲಿ ಭಾರೀ ಮಳೆಯಾಗುವುದರಿ0ದ ಆರೆ0ಜ್ ಅಲರ್ಟ್ ಘೋಷಿಸಲಾಗಿದೆ.
ಇಂದು ಹಿಮಾಚಲ ಪ್ರದೇಶ, ಉತ್ತರಾಖ0ಡದಲ್ಲೂ ಮಳೆ ಹೆಚ್ಚಾಗಲಿದೆ ಎ0ದು ಹವಾಮಾನ ಇಲಾಖೆ ತಿಳಿಸಿದೆ. ಇ0ದು ಜಮ್ಮು ಕಾಶ್ಮೀರ, ಲಡಾಖ್ ಭಾಗಗಳಲ್ಲಿ ಮಳೆ ಸುರಿಯಲಿದೆ. ಇ0ದು ರಾತ್ರಿಯಿ0ದ ನಾಳೆಯವರೆಗೆ ಆಂಧ್ರಪ್ರದೇಶ ಮತ್ತು ಒಡಿಶಾದ ಕರಾವಳಿ ಪ್ರದೇಶಗಳ ಪ್ರತ್ಯೇಕ ಸ್ಥಳಗಳಲ್ಲಿ ಗ0ಟಿಗೆ 80 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ.