ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ
ಶ್ರೀನಿವಾಸಪುರ: ಅಧಿಕಾರಿಗಳು ಅಭಿವೃದ್ಧಿ ಕಾಮಗಾರಿಗಳನ್ನು ನಿಗದಿತ ಸಮಯದೊಳಗೆ ಪೂರ್ಣಗೊಳಿಸಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.
ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಅಭೆಯಲ್ಲಿ ಮಾತನಾಡಿದ ಅವರು, ಹೋಳೂರು, ಸುಗಟೂರು ಹೋಬಳಿಗಳು ಸೇರಿದಂತೆ ತಾಲ್ಲೂಕಿನ ಎಲ್ಲ ಸರ್ಕಾರಿ ಶಾಲೆಗಳಿಗೆ ಅಗತ್ಯವಾದ ಮೂಲ ಸೌಕರ್ಯ ಒದಗಿಸಲಾಗುವುದು ಎಂದು ಹೇಳಿದರು.
ಅಗತ್ಯ ಇರುವ ಕಡೆ ಶಾಲಾ ಕಟ್ಟಡ ನಿರ್ಮಿಸಲಾಗುವುದು. ಶಾಲೆಗೆ ಅಗತ್ಯವಾದ ಗಂಥಾಲಯ, ಪ್ರಯೋಗ ಶಾಲೆ ಹಾಗೂ ಶುದ್ಧ ಕುಡಿಯುವ ನೀರು ಸೌಲಭ್ಯ ಒದಗಿಸಲಾಗುವುದು. ಕ್ಷೇತ್ರದಲ್ಲಿ 25 ಸರ್ಕಾರಿ ಪ್ರೌಢ ಶಾಲೆಗಳಿದ್ದು, ಎಲ್ಲ ಶಾಲೆಗಳಿಗೂ ಅಗತ್ಯವಾದ ಮೂಲ ಸೌಕರ್ಯ ನೀಡಲಾಗುವುದು. ಈಗಾಗಲೆ ಕೆಲವು ಪ್ರೌಢ ಶಾಲೆಗಳಿಗೆ ಸಿಸಿ ಟಿವಿ ಕ್ಯಾಮೆರಾ ಒದಗಿಸಲಾಗಿದೆ. ಉಳಿದ ಪ್ರೌಢ ಶಾಲೆಗಳಿಗೂ ಈ ಸೌಲಭ್ಯ ಒದಗಿಸಿಕೊಡಲಾಗುವುದು ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯ ಎಂ.ಎಲ್.ಅನಿಲ್ ಕುಮಾರ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಆನಂದ್, ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಉಮಾದೇವಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಆನಂದ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂಜಯ್ ರೆಡ್ಡಿ, ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಜೆ.ಎನ್.ನವೀನ್ ಕುಮಾರ್, ಡಿಸಿಸಿ ಬ್ಯಾಂಕ್ ನಿರ್ದೇಶಕ ವೆಂಕಟರೆಡ್ಡಿ ಇದ್ದರು.