

ಬಸ್ರೂರು: ಓಂ ಶ್ರೀ ಯೋಗ ಕೇಂದ್ರ ಬಸ್ರೂರು ಇವರಿಂದ ಯೋಗ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜರುಗಿತು ಬಸ್ರೂರು ಶ್ರೀ ಶಾರದಾ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಶ್ರೀ ಕೆ .ರಾಧಾಕೃಷ್ಣಶೆಟ್ಟಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ನಿತ್ಯದ ಜೀವನದಲ್ಲಿ ಯೋಗದ ಮಹತ್ವದ ಬಗ್ಗೆ ಮಾತನಾಡಿದರು.
2023-24ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 90 ಪ್ರತಿಶತ ಹಾಗೂ ಅಧಿಕ ಅಂಕವನ್ನು ಗಳಿಸಿದಂತಹ ಸ್ಥಳೀಯ ಬಸ್ರೂರು ಗ್ರಾಮದ ಸಾಧಕ ವಿದ್ಯಾರ್ಥಿ ಗಳಾದ ವಿಭಾ, ಸ್ಪಂದನ ಉಳ್ಳೂರು, ಸಾನಿಕಾ ಅವರನ್ನು ಸನ್ಮಾನಿಸಲಾಯಿತು.
ಮುಖ್ಯ ಅತಿಥಿಗಳಾಗಿ ಉದ್ಯಮಿ ಶ್ರೀ ಅನಿಲ್ ಕುಮಾರ್ ಶೆಟ್ಟಿ ಹಾಗೂ ಶ್ರೀಮತಿ ನಿರುಪಮ ಹೆಗ್ಡೆ ಉಪಸ್ಥಿತರಿದ್ದರು ಓಂ ಶ್ರೀ ಯೋಗ ಕೇಂದ್ರದ ಅಧ್ಯಕ್ಷರಾಗಿರುವ ಶ್ರೀ ಪ್ರಭಾಕರ್ ಐತಾಳ್ ಸ್ವಾಗತಿಸಿದರು ಕಾರ್ಯದರ್ಶಿಯಾಗಿರುವ ಅಶೋಕ್ ಕೆರೆಕಟ್ಟೆ ವಂದಿಸಿದರು ಶ್ರೀಮತಿ ಸಾರಿಕಾ ಅಶೋಕ್ ನಿರೂಪಿಸಿದರು.




