JANANUDI.COM NETWORK
‘ಕುಂದಪ್ರಭ’ ಸಂಸ್ಥೆಯ ಕೋ.ಮ. ಕಾರಂತ ಪ್ರಶಸ್ತಿ ಪ್ರದಾನ ಸಮಾರಂಭ ಫೆ. 3ರಂದು ಗುರುವಾರ ನಡೆಯಲಿದೆ. ಇದೇ ಸಮಾರಂಭದಲ್ಲಿ ಸ್ವಾತಂತ್ರ್ಯ ಯೋಧರ ಸ್ಮರಣೆಯಲ್ಲಿ ಅವರ ಕುಟುಂಬ ಸದಸ್ಯರನ್ನು ಗುರುತಿಸುವ ಕಾರ್ಯಕ್ರಮವೂ ನಡೆಯಲಿದೆ.
ಸ್ವಾತಂತ್ರ್ಯ ಯೋಧ ಕೃಷ್ಣರಾಯ ಕೊಡ್ಗಿಯವರ ಪುತ್ರ ಎ. ಗೋಪಾಲಕೃಷ್ಣ ಕೊಡ್ಗಿಯವರಿಗೆ ಕೋ.ಮ. ಕಾರಂತ ಪ್ರಶಸ್ತಿ ನೀಡಿ ಪುರಸ್ಕರಿಸಲಾಗುತ್ತದೆ.
ಸಮಾರಂಭದಲ್ಲಿ ಹನ್ನೆರಡು ಮಂದಿ ಸ್ವಾತಂತ್ರ್ಯ ಯೋಧರ ಕುಟುಂಬ ಸದಸ್ಯರಿಗೆ ಗೌರವ ನೀಡಲಾಗುತ್ತದೆ. ಕುಂದಾಪುರದ ಸರಕಾರಿ ಪದವಿಪೂರ್ವ ಕಾಲೇಜಿನ ರೋಟರಿ ಲಕ್ಷ್ಮೀ ನರಸಿಂಹ ಕಲಾಮಂದಿರದಲ್ಲಿ ಫೆ. 3 ರಂದು ಸಂಜೆ 4.30ಕ್ಕೆ ನಡೆಯುವ ಸಮಾರಂಭದಲ್ಲಿ ಕರ್ಣಾಟಕ ಬ್ಯಾಂಕ್ ಲಿ. ನ ಆಡಳಿತ ನಿರ್ದೇಶಕ ಮಹಾಬಲೇಶ್ವರ ಎಂ.ಎಸ್. ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅಧ್ಯಕ್ಷತೆ ವಹಿಸಲಿದ್ದಾರೆ.
ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಧರ್ಮದರ್ಶಿ ಬಿ. ಅಪ್ಪಣ್ಣ ಹೆಗ್ಡೆ ಕೋ.ಮ. ಕಾರಂತ ಪರಿಚಯ ಪುಸ್ತಕ ಬಿಡುಗಡೆ ಮಾಡಲಿದ್ದಾರೆ.
ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ ಹೆಗ್ಡೆ “ಅಭಿನಂದನಾ ನುಡಿ” ಆಡಲಿದ್ದಾರೆ.
ಉಡುಪಿ ಜಿಲ್ಲಾಧಿಕಾರಿ ಎಂ. ಕೂರ್ಮಾ ರಾವ್ ಸ್ವಾತಂತ್ರ್ಯ ಯೋಧರ ಕುಟುಂಬ ಸದಸ್ಯರಿಗೆ ಗೌರವ ನೀಡುವರು.
ದ.ಕ. ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ರವಿರಾಜ ಹೆಗ್ಡೆ ಶುಭಾಶಂಸನೆ ಮಾಡಲಿದ್ದಾರೆ.
ಕೋಟೇಶ್ವರದ ವೇಣುಗೋಪಾಲ ಭಟ್ ಅವರ ತಂಡದ ಸುಗಮ ಸಂಗೀತ ಮಧ್ಯಾಹ್ನ 4 ಗಂಟೆಗೆ ಆರಂಭಗೊಳ್ಳಲಿದೆ. ಖ್ಯಾತ ಅಪೂರ್ವ ವಸ್ತುಗಳ ಸಂಗ್ರಾಹಕ ಜಿ. ಭಾಸ್ಕರ ಕಲೈಕಾರ್ ಅವರ “ವಸ್ತು ಪ್ರದರ್ಶನ” ಏರ್ಪಡಿಸಲಾಗಿದೆ.
ಈ ಸಮಾರಂಭಕ್ಕೆ ಸರ್ವ ಸಮಾಜ ಬಾಂಧವರು ಪಾಲ್ಗೊಳ್ಳಬೇಕೆಂದು ಕುಂದಪ್ರಭ ಸಂಸ್ಥೆಯ ಅಧ್ಯಕ್ಷ ಯು.ಎಸ್.ಶೆಣೈ ವಿನಂತಿಸಿದ್ದಾರೆ.
ಫೋಟೋ : ಪ್ರಶಸ್ತಿ ಪುರಸ್ಕøತ ಎ.ಜಿ.ಕೊಡ್ಗಿಯವರನ್ನು ಸಾಂಪ್ರದಾಯಿಕವಾಗಿ ಆಹ್ವಾನಿಸಲಾಯಿತು. ಎ.ಜಿ.ಕೊಡ್ಗಿಯವರ ಧರ್ಮಪತ್ನಿ ಸುನಂದಾ, ಸಹೋದರ ಎ.ಅನಂತಕೃಷ್ಣ ಕೊಡ್ಗಿ, ಕುಂದಪ್ರಭ ಸಂಸ್ಥೆಯ ಅಧ್ಯಕ್ಷ ಯು.ಎಸ್.ಶೆಣೈ ಅವರನ್ನು ಕಾಣಬಹುದು.