ಕುಂದಾಪುರ : ಕುಂದಪ್ರಭ ಆಶ್ರಯದಲ್ಲಿ ಪ್ರದಾನ ಮಾಡಲಾಗುವ ಕೋ.ಮ.ಕಾರಂತ ಪ್ರಶಸ್ತಿ ಪ್ರದಾನ ಸಮಾರಂಭ ಜನವರಿ 7 ರಂದು ಭಾನುವಾರ ಸಂಜೆ 4 ಗಂಟೆಗೆ ಕುಂದಾಪುರ ಸರಕಾರಿ ಪ.ಪೂ.ಕಾಲೇಜಿನ ರೋಟರಿ ಲಕ್ಷ್ಮೀನರಸಿಂಹ ಕಲಾ ಮಂದಿರದಲ್ಲಿ ಜರುಗಲಿದೆ.
ಖ್ಯಾತ ವಿದ್ವಾಂಸ, ರಂಗ ನಿರ್ದೇಶಕ, ನಟ, ಕೊರ್ಗಿ ಶಂಕರನಾರಾಯಣ ಉಪಾಧ್ಯಾಯರಿಗೆ ಈ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
ಕರ್ನಾಟಕ ವಿಧಾನ ಪರಿಷತ್ನ ವಿರೋಧ ಪಕ್ಷದ ನಾಯಕ, ಕೋಟ ಶ್ರೀನಿವಾಸ ಪೂಜಾರಿ ಸಮಾರಂಭ ಉದ್ಘಾಟಿಸಲಿದ್ದಾರೆ. ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ ಹೆಗ್ಡೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ವಹಿಸಲಿದ್ದಾರೆ.
ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಕುಂದಾಪುರ ವಲಯದ ಗೃಹ ರಕ್ಷಕರಿಗೆ ಗೌರವ ನೀಡಲಿದ್ದಾರೆ.
ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ವಿಶ್ರಾಂತ ಆಡಳಿತ ಧರ್ಮದರ್ಶಿ ಕೆ. ಸೂರ್ಯನಾರಾಯಣ ಉಪಾಧ್ಯಾಯ ಅಭಿನಂದನಾ ಮಾತುಗಳನ್ನಾಡಲಿರುವರು.
ಕರ್ನಾಟಕ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ ಅವರು ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಿದ್ದಾರೆ.
ಸಮಾರಂಭದ ಆರಂಭದಲ್ಲಿ ಕೋಟೇಶ್ವರ ವೇಣುಗೋಪಾಲ ಭಟ್ ಹಾಗೂ ತಂಡದವರಿಂದ ಲಘು ಸಂಗೀತ ಕಾರ್ಯಕ್ರಮ ಏರ್ಪಡಿಸಲಾಗಿದೆ. ಸಾರ್ವನಿಕರು ಈ ಸಮಾರಂಭದಲ್ಲಿ ಪಾಲ್ಗೊಳ್ಳಬೇಕೆಂದು ಕುಂದಪ್ರಭ ಸಂಸ್ಥೆಯ ಅಧ್ಯಕ್ಷ ಯು.ಎಸ್.ಶೆಣೈ ಸರ್ವರನ್ನು ಆಹ್ವಾನಿಸಿದ್ದಾರೆ.