

ಕುಂದಾಪುರ: ಗಿಳಿಯಾರು ಕುಶಲಹೆಗ್ಡೆ ಮೆಮೋರಿಯಲ್ ಚಾರಿಟೆಬಲ್ ಟ್ರಸ್ಟ್ (ರಿ) ಕುಂದಾಪುರ ವತಿಯಿಂದ ಜೂನ್ 19 ರಂದು ಬುಧವಾರ ಮಧ್ಯಾಹ್ನ 3 ಗಂಟೆಗೆ ಕುಂದಾಪುರ ಸ.ಪ.ಪೂ.ಕಾಲೇಜಿನ ರೋಟರಿಲಕ್ಷ್ಮೀನರಸಿಂಹ ಕಲಾಮಂದಿರದಲ್ಲಿ ವಿದ್ಯಾರ್ಥಿಗಳಿಗೆ ಸಹಾಯಧನ ವಿತರಣೆ, ಸಾಧಕರಿಗೆ ಸನ್ಮಾನ ಹಾಗೂ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಸಮಾರಂಭ ನಡೆಯಲಿದೆ. ಹಿರಿಯ ಸಾಹಿತಿ, ಸಂಶೋಧಕ ಪ್ರೊ.ಎ.ವಿ. ನಾವಡ ವಿದ್ಯಾರ್ಥಿಗಳಿಗೆ ಸಹಾಯಧನ ವಿತರಣೆ ಮಾಡಲಿದ್ದಾರೆ.
ಖ್ಯಾತ ಲೆಕ್ಕ ಪರಿಶೋಧಕರು ಹಾಗೂ ಕಾನೂನು ಸಲಹೆಗಾರರಾದ ಸಿ.ಎ.ನಾಗರಾಜ ಆಚಾರ್ ಬೆಂಗಳೂರು, ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲಿದ್ದಾರೆ.
ಸಮಾರಂಭದ ಅಧ್ಯಕ್ಷತೆಯನ್ನು ಗಿಳಿಯಾರು ಕುಶಲ ಹೆಗ್ಡೆ ಸ್ಮಾರಕ ದತ್ತಿನಿಧಿಯ ಅಧ್ಯಕ್ಷ ಬಿ.ಪ್ರಕಾಶ್ಚಂದ್ರ ಶೆಟ್ಟಿ ವಹಿಸಲಿದ್ದಾರೆ.
ಕುಂದಾಪುರ, ಬೈಂದೂರು ತಾಲ್ಲೂಕಿನ ಸುಮಾರು 400 ವಿದ್ಯಾರ್ಥಿಗಳಿಗೆ ಸಹಾಯಧನ ನೀಡಲಾಗುತ್ತಿದ್ದು, ಎಸ್.ಎಸ್. ಎಲ್.ಸಿ. ಹಾಗೂ ಪಿಯುಸಿ ಯಲ್ಲಿ ರಾಜ್ಯಮಟ್ಟದಲ್ಲಿ ರ್ಯಾಂಕ್ ಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸಲಾಗುತ್ತದೆ. ಈ ಸಮಾರಂಭದಲ್ಲಿ ವಿದ್ಯಾರ್ಥಿಗಳು, ಪೋಷಕರು, ಸಾರ್ವಜನಿಕರು ಪಾಲ್ಗೊಳ್ಳಬೇಕೆಂದು ಆಹ್ವಾನಿಸಲಾಗಿದೆ.