ಪಟ್ಟಣದಲ್ಲಿ ತಾ. ರಾ. ಹಬ್ಬಗಳ ಆಚರಣಾ ಸಮಿತಿ ಹಾಗೂ ವಿವಿಧ ದಲಿತ ಪರ ಸಂಘಟನೆಗಳಿಂದ ಡಾ. ಬಾಬು ಜಗಜೀವನ್ ರಾಮ್ ಜಯಂತಿ

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ: ಪಟ್ಟಣದಲ್ಲಿ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ವಿವಿಧ ದಲಿತ ಪರ ಸಂಘಟನೆಗಳಿಂದ ಮಂಗಳವಾರ ಡಾ. ಬಾಬು ಜಗಜೀವನ್ ರಾಮ್ ಜಯಂತಿ ಆಚರಿಸಲಾಯಿತು.
ಜಯಂತಿ ಅಂಗವಾಗಿ ಏರ್ಪಡಿಸಲಾಗಿದ್ದ ಡಾ. ಬಾಬು ಜಗಜೀವನ್ ರಾಮ್ ಅವರ ಭಾವ ಚಿತ್ರ ಮೆರವಣಿಗೆಗೆ ತಹಶೀಲ್ದಾರ್ ಹನ್ಸಾಮರಿಯ ಚಾಲನೆ ನೀಡಿದರು.
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಆನಂದ್, ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಉಮಾದೇವಿ, ಶಿರಸ್ತೇದಾರ್ ಮನೋಹರ ಮಾನೆ, ಹಿರಿಯ ಕಂದಾಯ ನಿರೀಕ್ಷಕ ಬಿ.ವಿ.ಮುನಿರೆಡ್ಡಿ, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಎಂ.ಕೆ.ಹುಸೇನ್ ಸಾಬ್, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಶಿವಕುಮಾರ್, ಬಿಸಿಎಂ ಅಧಿಕಾರಿ ರವಿಕುಮಾರ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಶ್ರೀನಿವಾಸನ್, ವಿವಿಧ ದಲಿತ ಸಂಘಟನೆಗಳ ಮುಖಂಡರಾದ ವರ್ತನಹಳ್ಳಿ ವೆಂಕಟೇಶ್, ಈರಪ್ಪ, ನಾರಾಯಣಸ್ವಾಮಿ, ಶಂಕರ್, ಗುರುಮೂರ್ತಿ, ರವಿ ಸಿ.ಮುನಿಯಪ್ಪ, ಕೂತ್ಸಂದ್ರ ರೆಡ್ಡಪ್ಪ ಇದ್ದರು