JANANUDI.COM NETWORK

ಬೆಳಗಾವಿ,ಮೇ.೪: ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿಯಲ್ಲಿ ಸುಧಾರಣೆಯಾದರೆ ಮಾತ್ರ ಎಸ್‌ಎಸ್ ಎಲ್ ಸಿ ಪರೀಕ್ಷೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ
ಅವರು ಇಂದು ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ ಯಾವುದೇ ಕಾರಣಕ್ಕೂ ಪಾಲಕರು ಹಾಗೂ ವಿದ್ಯಾರ್ಥಿಗಳು ಆತಂಕ ಪಡಬೇಕಾಗಿಲ್ಲ. ಕೋವಿಡ್ ಪರಿಸ್ಥಿತಿ ನಿಯಂತ್ರಣಕ್ಕೆ ಬರದಿದ್ದರೆ ಎಸ್. ಎಸ್.ಎಲ್.ಸಿ. ಪರೀಕ್ಷೆ ರದ್ದು ಪಡಿಸಲಾಗುವದು ಎಂದರು ಅವರು ಧೈರ್ಯ ತುಂಬಿದ್ದಾರೆ.