ಕೋಲಾರ:- ಜಿಲ್ಲಾಧ್ಯಂತ ಇರುವ ಕೈಗಾರಿಕೆಗಳ ಸಿಎಸ್ಆರ್ ನಿಧಿಯನ್ನು ಎರಡು ವರ್ಷಗಳ ಕಾಲ ಶಾಲೆಗಳ ಸಮಗ್ರ ಅಭಿವೃದ್ದಿಗೆ ಬಳಸಲು ನಿರ್ಧರಿಸಿದ್ದೇವೆ, ಇದರ ಜತೆಗೆ ಒಪಿಎಸ್ ಹಾಗೂ 7ನೇ ವೇತನ ಆಯೋಗ ಜಾರಿಗಾಗಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ರನ್ನು ಗೆಲ್ಲಿಸುವಂತೆ ಶಾಸಕ ಕೊತ್ತೂರು ಮಂಜುನಾಥ್ ಕರೆ ನೀಡಿದರು.
ತಾಲ್ಲೂಕಿನ ಅರಾಭಿಕೊತ್ತನೂರು ಸರ್ಕಾರಿ ಶಾಲೆಯಲ್ಲಿ ಡಿಟಿ ಶ್ರೀನಿವಾಸ್ ಪರ ಶಿಕ್ಷಕರ ಮತಯಾಚಿಸಿದ ಅವರು, ಸಿಎಸ್ಆರ್ ನಿಧಿಯನ್ನು ಶಾಲೆಗಳಲ್ಲಿ ಶೌಚಾಲಯ, ಕಟ್ಟಡ ದುರಸ್ಥಿ, ಹೊಸ ಕಟ್ಟಡಗಳ ನಿರ್ಮಾಣ ಅಗತ್ಯ ಮೂಲಸೌಲಭ್ಯಗಳನ್ನು ಒದಗಿಸಲು ಬಳಸಲು ಸೂಚಿಸಲಾಗಿದೆ ಎಂದರು.
ಕಾಂಗ್ರೆಸ್ ಪಕ್ಷ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ಹಳೆ ಪಿಂಚಣಿ ವ್ಯವಸ್ಥೆ ಜಾರಿಗೆ ಬದ್ದವಾಗಿದೆ, 7ನೇ ವೇತನ ಆಯೋಗದ ವರದಿಯೂ ಸರ್ಕಾರದ ಕೈಸೇರಿದ್ದು ಅದೂ ಜಾರಿಯಾಗಲಿದೆ ಎಂದ ಅವರು, ಈ ಕುರಿತು ಚುನಾವಣಾ ನೀತಿ ಸಂಹಿತೆ ಇರುವುದರಿಂದ ಅಧಿಕೃತವಾಗಿ ಪ್ರಕಟಿಸಲು ಸಾಧ್ಯವಾಗುತ್ತಿಲ್ಲ ಎಂದರು.
ದೇಶವು ಅಭಿವೃದ್ಧಿಯಾಗಲು ಶಿಕ್ಷಣ, ಆರೋಗ್ಯ ಮತ್ತು ರೈತರಿಗೆ ಮೊದಲ ಅಧ್ಯತೆ ನೀಡಬೇಕಾಗಿದೆ ಕಾಂಗ್ರೆಸ್ ಪಕ್ಷವು ಸಾಮಾನ್ಯ ಜನರ ಅಭಿವೃದ್ಧಿಯ ದೃಷ್ಟಿಯಿಂದ ಬಹಳಷ್ಟು ಕೊಡುಗೆಗಳನ್ನು ನೀಡಿದೆ ಎಂದರು.
ಸಿದ್ದರಾಮಯ್ಯನವರು ಯಾವುದೇ ಧರ್ಮ, ಜಾತಿಗೆ ಸೀಮಿತವಾಗದೆ ಎಲ್ಲಾ ವರ್ಗದ ಜನರಿಗೂ ಯೋಜನೆಗಳನ್ನು ರೂಪಿಸಿದ್ದಾರೆ. ಹೀಗಾಗಿ ಡಿ.ಟಿ ಶ್ರೀನಿವಾಸ್ ಅವರನ್ನು ಗೆಲ್ಲಿಸಿ ಸಿದ್ದರಾಮಯ್ಯ ಡಿ.ಕೆ ಶಿವಕುಮಾರ್ ಅವರ ಕೈ ಬಲಪಡಿಸಬೇಕು, ಶಿಕ್ಷಕರ ಸಮಸ್ಯೆಗಳಿಗೆ ಸದನದಲ್ಲಿ ಡಿಟಿ ಶ್ರೀನಿವಾಸ್ ಧ್ವನಿಯಾಗಲಿದ್ದಾರೆ ಅವರು ಶಿಕ್ಷಣ ಸಂಸ್ಥೆಗಳನ್ನು ಹೊಂದಿದ್ದು, ಸಾವಿರಾರು ಮಕ್ಕಳಿಗೆ ಶಿಕ್ಷಣ ನೀಡುತ್ತಿದ್ದಾರೆ ಎಂದರು.
ತಿರಸ್ಕøತ ಮತಗಳಿಗೆ ಅವಕಾಶ ನೀಡದಿರಿ
ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ, ಶಿಕ್ಷಕರ ಕ್ಷೇತ್ರದ ಕಳೆದ ಚುನಾವಣೆಯಲ್ಲಿ 6 ಸಾವಿರ ಮತಗಳು ತಿರಸ್ಕøತಗೊಂಡಿದ್ದವು, ಈ ಬಾರಿ ಎಚ್ಚರಿಕೆಯಿಂದ ಮತದಾನ ಮಾಡಲು ಮನವಿ ಮಾಡಿದರು.
ಆಗ್ನೇಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಡಿ.ಟಿ ಶ್ರೀನಿವಾಸ್ ಶಿಕ್ಷಕರ ಮತ್ತು ಶಿಕ್ಷಣ ಸಂಸ್ಥೆಗಳ ಸಮಸ್ಯೆಗಳನ್ನು ಬಲ್ಲವರಾಗಿದ್ದಾರೆ. ಸಮಸ್ಯೆಗಳನ್ನು ಹೇಗೆ ಪರಿಹಾರ ಮಾಡಬೇಕು ಎಂಬುದು ಅವರಿಗೆ ತಿಳಿದಿದೆ ಇಂತಹವರು ವಿಧಾನಪರಿಷತ್ಗೆ ಆಯ್ಕೆಯಾಗಿ ಬಂದರೆ, ಶಿಕ್ಷಣ ಕ್ಷೇತ್ರದ ಜಲ್ವಂತ ಸಮಸ್ಯೆಗಳನ್ನು ಪರಿಹಾರ ಸಾಧ್ಯ ಎಂದರು.
ಕ್ಷೇತ್ರದಲ್ಲಿ ಸುಮಾರು 18 ವರ್ಷಗಳಿಂದ ಆಯ್ಕೆಯಾಗಿದ್ದವರು ಶಿಕ್ಷಣ ಕ್ಷೇತ್ರಕ್ಕೆ ಒತ್ತು ನೀಡಲಿಲ್ಲ ಹಾಗಾಗಿ ಶಿಕ್ಷಣದ ಗುಣಮಟ್ಟ ಕುಸಿದಿದೆ. ಶಿಕ್ಷಣವನ್ನು ಅಧೋಗತಿಗೆ ತಂದು ತರಿಸಿದ್ದಾರೆ ಎಂದರು.
ಐದು ಜಿಲ್ಲೆಗಳ 33 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡ ಈ ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಸುಮಾರು 24 ಸಾವಿರದಷ್ಟು ಶಿಕ್ಷಕರು ಇದ್ದು ಸರಕಾರ ಇದ್ದ ಪಕ್ಷಕ್ಕೆ ಬೆಂಬಲಿಸಿದರೆ ನಿಮ್ಮ ಸಮಸ್ಯೆಗಳಿಗೆ ಸ್ಪಂದನೆ ಸಿಗುತ್ತದೆ ಎಂದರು.
ಸರ್ಕಾರಿ ನೌಕರರ ಹಳೇ ಪಿಂಚಣಿ ಯೋಜನೆ ಜಾರಿಗೆ ತರುವ ನಿಟ್ಟಿನಲ್ಲಿ ಕಾಂಗ್ರೆಸ್ ಸರ್ಕಾರ ಮುಂದಾಗಿದ್ದು, ಈಗಾಗಲೇ ಹಳೆ ಪಿಂಚಣಿ ಯೋಜನೆ ಜಾರಿಯಲ್ಲಿರುವ ರಾಜ್ಯಗಳಿಗೆ ತೆರಳಿ ಅಧ್ಯಯನ ಮಾಡಿ ವರದಿ ಕೊಡಲು ಅಧಿಕಾರಿಗಳ ಸಮಿತಿ ರಚನೆ ಮಾಡಲಾಗಿದೆ. ಅಲ್ಲದೇ 7ನೇ ವೇತನ ಜಾರಿಗೂ ಮುಂದಾಗಿದೆ ಎಂದರು.
ಕಾಂಗ್ರೆಸ್ ನೇತೃತ್ವದ ಸರಕಾರವು ಬೌಧ್ಧಿಕವಾಗಿ ಮಕ್ಕಳು ಬೆಳೆಯಬೇಕು ಎಂಬ ಆಶಯದೊಂದಿಗೆ ಖಾಲಿ ಶಿಕ್ಷಕರ ಹುದ್ದೆಗಳನ್ನು ತುಂಬಲು ಮುಂದಾಗಿದೆ.ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುತ್ತದೆ ಸರಕಾರದ ಪರವಾಗಿ ಇದ್ದವರನ್ನು ಆಯ್ಕೆ ಮಾಡಿದರೆ ಮಾತ್ರ ಸಮಸ್ಯೆಗೆ ಪರಿಹಾರ ಮತ್ತು ಬದಲಾವಣೆ ತರಲು ಸಾಧ್ಯವಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ನರಸಾಪುರ ಎಸ್ಎಫ್ಸಿಎಸ್ ಅಧ್ಯಕ್ಷ ಮುನಿರಾಜು, ಗ್ರಾ.ಪಂ ಮಾಜಿ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ಮುಖಂಡರಾದ ಗ್ರಾ.ಪಂ ಮಾಜಿ ಸದಸ್ಯ ಎ.ಶ್ರೀಧರ್, ಮಾಜಿ ಉಪಾಧ್ಯಕ್ಷ ವೈ.ಮುನಿಯಪ್ಪ, ಮುಖಂಡರಾದ ಗಜೇಂದ್ರ, ನಿವೃತ್ತ ಮುಖ್ಯ ಶಿಕ್ಷಕ ದಾಸಪ್ಪ, ಮುಖಂಡರಾದ ರವೀಂದ್ರನಾಥ್, ಜರಾಲ್ಡ್, ಶಾಲೆಯ ಮುಖ್ಯಶಿಕ್ಷಕಿ ತಾಹೇರಾ ನುಸ್ರತ್, ಶಿಕ್ಷಕರಾದ ಸಿದ್ದೇಶ್ವರಿ, ಎಂ.ಆರ್.ಗೋಪಾಲಕೃಷ್ಣ, ಭವಾನಿ, ವೆಂಕಟರೆಡ್ಡಿ, ಶ್ವೇತಾ,ಲೀಲಾ,ಸುಗುಣಾ, ಫರೀದಾ, ಚಂದ್ರಶೇಖರ್ ಮತ್ತಿತರರಿದ್ದರು.