ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ: ಪಟ್ಟಣದ ತಾಲ್ಲೂಕು ಕಚೇರಿ ಮುಂದೆ, ತಾಲ್ಲೂಕು ದಲಿತ ಸಂಘಟನೆಗಳ ಒಕ್ಕೂಟದ ಸದಸ್ಯರು ಬುಧವಾರ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.
ಸರ್ಕಾರ ಪಿಟಿಸಿಎಲ್ ಕಾಯ್ದೆಯನ್ನು ಅನುಷ್ಠಾನಗೊಳಿಸಲು ಇರುವ ತೊಡಕುಗಳನ್ನು ನಿವಾರಿಸಬೇಕು. ದಲಿತರ ಭೂಮಿ ಹಕ್ಕನ್ನು ರಕ್ಷಿಸಬೇಕು. ಭೂ ಪರಭಾರೆ ಮೊಷೇಧ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಂತೆ ಜಿಲ್ಲಾಧಿಕಾರಿಗಳು ಉಪ ವಿಭಾಗಾಧಿಕಾರಿಗಳಿಗೆ ಸೂಚಿಸಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.
ತಮ್ಮ ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರವನ್ನು ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ಅವರಿಗೆ ನೀಡಲಾಯಿತು.
ವಿವಿಧ ದಲಿತ ಪರ ಸಂಘಟನೆಗಳ ಮುಖಂಡರಾದ ರಾಮಾಂಜಮ್ಮ, ಈರಪ್ಪ, ಎನ್.ತಿಮ್ಮಯ್ಯ, ಪಾಪನ್ನ, ಪ್ರಸಾದ್, ಅಂಬರೀಶ್ ಇದ್ದರು.