

ಮೂಡ್ಲಕಟ್ಟೆ ಐ ಎಂ ಜೆ ವಿದ್ಯಾಸಂಸ್ಥೆಗಳ ಆರೋಗ್ಯ ವಿಜ್ಞಾನ ವಿಭಾಗದ ಕೋರ್ಸುಗಳ ಓರಿಯೆಂಟೇಷನ್ ಕಾರ್ಯಕ್ರಮವನ್ನು 7ನೇ ಅಕ್ಟೋಬರ್ 2026 ರಂದು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ B.Sc. ನರ್ಸಿಂಗ್ನ 7ನೇ ಬ್ಯಾಚ್, ಅಲೈಡ್ ಹೆಲ್ತ್ ಸೈನ್ಸಸ್ನ 3ನೇ ಬ್ಯಾಚ್ ಹಾಗೂ ಫಿಸಿಯೋಥೆರಪಿಯ 2ನೇ ಬ್ಯಾಚ್ಗಳ ಉದ್ಘಾಟನೆಯನ್ನು ನೆರವೇರಿಸಲಾಯಿತು.
ಮೂಡ್ಲಕಟ್ಟೆ ಕಾಲೇಜ್ ಆಫ್ ನರ್ಸಿಂಗ್ನ ಪ್ರಾಂಶುಪಾಲರಾದ ಪ್ರೊ. ಜೆನ್ನಿಫರ್ ಫ್ರೀಡಾ ಮೆನೆಜಸ್ ಅವರು ಕಾರ್ಯಕ್ರಮಕ್ಕೆ ಆಗಮಿಸಿದ ಗಣ್ಯರು, ಬೋಧಕ ವೃಂದ ಹಾಗೂ ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಸ್ವಾಗತಿಸಿದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಪ್ರೊ. ಡಾ. ಮೊಹಮ್ಮದ್ ಸುಹೈಲ್ PT ಅವರು ಉದ್ಘಾಟನಾ ಭಾಷಣ ಮಾಡಿದರು. ತಮ್ಮ ಭಾಷಣದಲ್ಲಿ ಅವರು ಆರೋಗ್ಯ ಕ್ಷೇತ್ರದಲ್ಲಿ ವೃತ್ತಿಪರತೆ, ಮಾನವೀಯತೆ, ಸಮರ್ಪಣೆ ಹಾಗೂ ಬದ್ಧತೆಯ ಮಹತ್ವವನ್ನು ಒತ್ತಿ ಹೇಳಿದರು. ಸಮರ್ಥ ಹಾಗೂ ಮಾನವೀಯ ಗುಣಗಳನ್ನು ಹೊಂದಿರುವ ಆರೋಗ್ಯ ವೃತ್ತಿಪರರನ್ನು ರೂಪಿಸುವ ನಿಟ್ಟಿನಲ್ಲಿ ಗುಣಮಟ್ಟದ ಶಿಕ್ಷಣ, ಉತ್ತಮ ಸೌಲಭ್ಯಗಳು ಹಾಗೂ ವಿದ್ಯಾರ್ಥಿಗಳಿಗೆ ಅನುಕೂಲಕರವಾದ ಕಲಿಕಾ ವಾತಾವರಣವನ್ನು ಒದಗಿಸುತ್ತಿರುವ ಐಎಂಜೆ ಸಂಸ್ಥೆಗಳ ಪ್ರಯತ್ನಗಳನ್ನು ಅವರು ಶ್ಲಾಘಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಐಎಂಜೆ ಸಂಸ್ಥೆಗಳ ಅಕಾಡೆಮಿಕ್ಸ್ ನಿರ್ದೇಶಕರಾದ ಡಾ. ಎಸ್.ಎನ್. ಭಟ್ ಅವರು ವಹಿಸಿದ್ದರು. ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಅವರು ಆರೋಗ್ಯ ವಿಜ್ಞಾನ ವಿಭಾಗದ ಕೋರ್ಸುಗಳ ಮಹತ್ವ ಮತ್ತು ಐ ಎಂ ಜೆ ವಿದ್ಯಾಸಂಸ್ಥೆಗಳಲ್ಲಿ ಸಿಗುವ ಸದವಕಾಶಗಳಬಗ್ಗೆ ವಿವರಿಸಿದರು. ಪ್ರೊ. ಜೆನ್ನಿಫರ್ ಫ್ರೀಡಾ ಮೆನೆಜಸ್, ಪ್ರಾಂಶುಪಾಲರು, ಮೂಡ್ಲಕಟ್ಟೆ ಕಾಲೇಜ್ ಆಫ್ ನರ್ಸಿಂಗ್ ಹಾಗೂ ಪ್ರೊ. ಹೇಮಲತಾ, ಪ್ರಾಂಶುಪಾಲರು, ಅಲೈಡ್ ಹೆಲ್ತ್ ಸೈನ್ಸಸ್ ಅವರು ಉಪಸ್ಥಿತರಿದ್ದರು.
ಕಾರ್ಯಕ್ರಮದ ಅಂತ್ಯದಲ್ಲಿ ಪ್ರೊ. ಹೇಮಲತಾ ಅವರು ವಂದನಾರ್ಪಣೆ ಸಲ್ಲಿಸಿದರು. ಕಾರ್ಯಕ್ರಮದ ಯಶಸ್ವಿ ಆಯೋಜನೆಗೆ ಸಹಕರಿಸಿದ ಗಣ್ಯರು, ಬೋಧಕ ವೃಂದ, ವಿದ್ಯಾರ್ಥಿಗಳು ಹಾಗೂ ಎಲ್ಲರಿಗೂ ಅವರು ಕೃತಜ್ಞತೆ ಸಲ್ಲಿಸಿದರು. ಸುಷ್ಮಾ ಉಪಾಧ್ಯಾಯ ಅವರು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಿದರು. ಅಂತಿಮವಾಗಿ ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮವು ಯಶಸ್ವಿಯಾಗಿ ಮುಕ್ತಾಯಗೊಂಡಿತು.

