

ಶ್ರೀನಿವಾಸಪುರ 1 : ನಮ್ಮ ಮತವು ನಮ್ಮ ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಮತದಾನದ ಬಗ್ಗೆ ನಿರ್ಲಕ್ಷ್ಯತೆ ತೊರದೆ ಎಲ್ಲರೂ ಕಡ್ಡಾಯ ಮತದಾನ ಮಾಡಿ ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ವಿ.ಕೃಷ್ಣಪ್ಪ ಹೇಳಿದರು.
ತಾಲೂಕಿನ ಗೌನಿಪಲ್ಲಿ ಗ್ರಾಮದಲ್ಲಿ ಮಂಗಳವಾರ ನಡೆದ ವನಿತಾ ವೈಭವ ಕಾರ್ಯಕ್ರಮದ ಅಂಗವಾಗಿ ನಡೆದ ಜಾಥ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಕೇಂದ್ರ ಚುನಾವಣಾ ಆಯೋಗವು ಮತದಾನ ಪ್ರಮಾಣ ಹೆಚ್ಚಿಸಲು ಸಾಕಷ್ಟು ಹೊಸ ಯೋಜನೆಗಳನ್ನು ಜಾರಿಗೆ ತರುತ್ತಿದೆ, ಈ ಬಾರಿ 80 ವರ್ಷಕಿಂತ ಹೆಚ್ಚಿನ ವಯೋವೃದ್ಧರು ಮತಗಟ್ಟೆಗೆ ಬಂದು ಮತ ಚಲಾಯಿಸಲು ಆಗದಿದ್ದವರ ಮನೆಗೆ ಮತಗಟ್ಟೆ ಅಧಿಕಾರಿಗಳು ತೆರಳಿ ಮತದಾನ ಪಡೆಯುವ ಯೋಜನೆ ಜಾರಿಗೆ ತಂದಿದೆ ಎಂದರು. ಈ ಒಂದು ಉದ್ದೇಶದಿಂದ ಪ್ರತಿಯೊಬ್ಬ ಪ್ರಜೆಯು ತಮ್ಮ ದೇಶದ ಭವಿಷ್ಯಕ್ಕಾಗಿ ತಮ್ಮ ಅಮೂಲ್ಯವಾದ ಮತವನ್ನು ಕಡ್ಡಾಯವಾಗಿ ಚಲಾಯಿಸುವಂತೆ ಕರೆ ನೀಡಿದರು.
ಗೌನಿಪಲ್ಲಿ ಪಿಡಿಒ ಗೌಸ್ಸಾಬ್, ತಾಲೂಕಿನ ಎಲ್ಲಾ ಪಿಡಿಒಗಳು, ಜಲಗಾರರು, ಸ್ವಸಹಾಯ ಸಂಘಗಳ ಸಹಕಾರದೊಂದಿಗೆ ಕಾರ್ಯಕ್ರಮವು ನಡೆಯಿತು.