ಖಾಸಗಿ ಬಾಡಿಗೆ ವಾಹನಗಳಲ್ಲಿ (ಖಾಸಗಿ ಸೇವೆಯ ವಾಹನಗಳಲ್ಲಿ) ಒಬ್ಬೊಬ್ಬರೇ ಪ್ರಯಾಣಿಸುವುದೆಂದರೆ ಇತ್ತೀಚಿನ ದಿನಗಳಲ್ಲಿ
ಭಯವಾಗಿದೆ. ಮಹಿಳೆ, ಮಕ್ಕಳು, ಗಂಡಸರೆನ್ನದೆ ತೊಂದರೆ ಅನುಭವಿಸುತ್ತಿದ್ದಾರೆ. ಕೆಲವು ವೇಳೆ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯಗಳಂತಹ ಪ್ರಕರಣಗಳು ಸಂಭವಿಸುತ್ತಾರೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ಎಲ್ಲ ಕಡೆ ರಾತ್ರಿ ವೇಳೆ ಇಲ್ಲವೇ ಅಪರಿಚಿತ ಸ್ಥಳಕ್ಕೆ ಸಾರ್ವಜನಿಕ ಸೇವಾ ವಾಹನಗಳಿಗೆ ವೆಹಿಕಲ್ ಲೊಕೇಷನ್ ಟ್ರ್ಯಾಕಿಂಗ್ ಡಿವೈಸ್ ಮತ್ತು ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆಯನ್ನು ಕಡ್ಡಾಯ ಮಾಡಿ ಆದೇಶಿಸಲಾಗಿದೆ.
ವಿಎಲ್ಟಿ ಹಾಗೂ ಪ್ಯಾನಿಕ್ ಬಟನ್ ಅನ್ನು ಎಲ್ಲ ರೀತಿಯ ಸಾರ್ವಜನಿಕ ಸೇವಾ ವಾಹನಗಳು ಅಳವಡಿಸಬೇಕು. ಎಲ್ಲೋ ಬೋರ್ಡ್ ಟ್ಯಾಕ್ಸಿಗಳು , ಕ್ಯಾಬ್ಗಳು, ಖಾಸಗಿ ಬಸ್ಗಳು ನ್ಯಾಷನಲ್ ಪರ್ಮಿಟ್ ಹೊಂದಿರುವ ಗೂಡ್ಸ್ ವಾಹನಗಳಿಗೆ ಈ ಆದೇಶ ಅನ್ವಯವಾಗಲಿದೆ. ಅಂತಿಮ ಗಡುವಿನೊಳಗೆ ಅಳವಡಿಸದಿದ್ದರೆ ದಂಡ ಹಾಕಲಾಗುತ್ತದೆ. ಅಳವಡಿಸಲಾದ ಮಾನಿಟರಿಂಗ್ ನಕ್ಷೆಯಲ್ಲಿ ವಾಹನದ ಲೊಕೇಷನ್ ಟ್ರ್ಯಾಕಿಂಗ್ ನಡೆಯುತ್ತದೆ. ಹೀಗಾಗಿ ಯಾವುದೇ ವಾಹನ ಎಲ್ಲಿಯೇ ಸಂಚರಿಸಿದರೂ ಇದರಿಂದ ಗೊತ್ತಾಗುತ್ತದೆ. ಇದು ನಿರ್ಬಂಧಿತ ಪ್ರದೇಶ, ಸಂಚಾರ ನಿಯಮಗಳ ಉಲ್ಲಂಘನೆ ಹಾಗೂ ಅತಿ ವೇಗದ ಚಾಲನೆ ಮಾಡಿದಾಗ ಎಚ್ಚರಿಕೆಯನ್ನು ರವಾನೆ ಮಾಡುತ್ತದೆ.