ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ
ಶ್ರೀನಿವಾಸಪುರ: ಪೋಷಕರು ಮಕ್ಕಳಿಗೆ ಕಡ್ಡಾಯವಾಗಿ ಕೊರೊನಾ ವಿರುದ್ಧ ಲಸಿಕೆ ಕೊಡಿಸಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.
ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಸಾರ್ವಜನಿಕ ಆರೋಗ್ಯ ಇಲಾಖೆ ವತಿಯಿಂದ ಸೋಮವಾರ ಏರ್ಪಡಿಸಿದ್ದ ಸಮಾರಂಭದಲ್ಲಿ 15 ರಿಂದ 18 ವರ್ಷದ ಮಕ್ಕಳಿಗೆ ಕೊರೊನಾ ವಿರುದ್ಧ ಲಸಿಕೆ ನೀಡುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕೋವಿಡ್ ಸಂದರ್ಭದಲ್ಲಿ ಕೊರೊನಾ ವಾರಿಯರ್ಸ್ ಸೇವೆ ಶ್ಲಾಘನೀಯ, ವೈದ್ಯರು, ವೈದ್ಯಕೀಯ ಸಿಬ್ಬಂದಿ, ವಿವಿಧ ಸೇವಾ ಸಂಘ ಸಂಸ್ಥೆಗಳ ಕಾರ್ಯಕರ್ತರು ಪ್ರಾಣದ ಮೇಲಿನ ಹಂಗು ತೊರೆದು ರೋಗ ನಿಯಂತ್ರಣಕ್ಕೆ ಶ್ರಮಿಸುತ್ತಿದ್ದಾರೆ. ಅವರ ತ್ಯಾಗದ ಬಗ್ಗೆ ನಾವು ಹೆಮ್ಮೆಪಡಬೇಕು ಎಂದು ಹೇಳಿದರು.
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಆನಂದ್, ಪುರಸಭೆ ಮುಖ್ಯಾಧಿಕಾರಿ ವೈ.ಎನ್.ಸತ್ಯನಾರಾಯಣ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಚಂದನ್, ತಾಲ್ಲೂಕು ವೈದ್ಯಾಧಿಕಾರಿ ಎಂ.ಸಿ.ವಿಜಯ, ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಉಮಾದೇವಿ, ಬಿಆರ್ಸಿ ಕೆ.ಸಿ.ವಸಂತ, ಪ್ರಾಂಶುಪಾಲ ಪ್ರಾಣೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂಜಯ್ ರೆಡ್ಡಿ, ಹರೀಶ್, ಸುಬ್ರಮಣಿ ಇದ್ದರು.