

ಕುಂದಾಪುರ: ಮಾರ್ಚ್ 19ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ರಕ್ಷಕ ಶಿಕ್ಷಕ ಸಂಘದ ಸಭೆ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಸದಾನಂದ ಕಾಮತ್ ಮಾತನಾಡಿ ಮಗುವಿನ ಸರ್ವತೋಮುಖ ಅಭಿವೃದ್ಧಿಯಲ್ಲಿ ಶಿಕ್ಷಕರು ಜವಾಬ್ದಾರಿ ಬಹಳವಿದೆ.
ಅದಕ್ಕಾಗಿ ಕಾಲೇಜು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಅಂದರೆ ಕುರಿತು ಮೆಚ್ಚುಗೆ ವ್ಯಕ್ತಪಡಿಸಿ ಕೇಂದ್ರ ಸರ್ಕಾರದ ಕೌಶಲ್ಯ ಅಭಿವೃದ್ಧಿ ಯೋಜನೆಯ ಕಾರ್ಯಕ್ರಮ ಪಿ.ಎಮ್.ಕೆ ವಿ.ವಾಯ್ ಭಂಡಾರ್ಕಾರ್ಸ್ ಕಾಲೇಜಿಗೆ ದೊರೆತಿರುವ ಕುರಿತು ಅಭಿನಂದಿಸಿದರು.
ಕಾಲೇಜಿನ ಪ್ರಾಂಶುಪಾಲರಾದ ಡಾ.ಶುಭಕರಾಚಾರಿ ಪ್ರಾಸ್ತಾವಿಕವಾಗಿ ಮಾತನಾಡಿ ಕಾಲೇಜಿನ ಉದ್ಯೋಗ ಆಧಾರಿತ ಮತ್ತು ಅದಕ್ಕೆ ಪೂರಕ ಸೌಲಭ್ಯಗಳ ಕುರಿತು ವಿವರಿಸಿದರು.
ಕಾಲೇಜಿನ ಅರಕ್ಷಕ ಶಿಕ್ಷಕ ಸಂಘದ ಕಾರ್ಯದರ್ಶಿ ಸಂಜೀವ ತೆಕ್ಕಟ್ಟೆ ಉಪಸ್ಥಿತರಿದ್ದರು.
ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ. ಸತ್ಯನಾರಾಯಣ ಸ್ವಾಗತಿಸಿದರು. ಅನ್ವಯಿಕ ವಿಜ್ಞಾನ ವಿಭಾಗದ ಪ್ರೊ.ವಿದ್ಯಾರಾಣಿ ಕಾರ್ಯಕ್ರಮ ನಿರೂಪಿಸಿದರು. ಕಂಪ್ಯೂಟರ್ ವಿಭಾಗದ ಉಪನ್ಯಾಸಕ ಮುಕುಂದ ಭಟ್ ಕಾಲೇಜಿನ ತಂತ್ರಜ್ಞಾನ ಸೌಲಭ್ಯಗಳ ಬಗ್ಗೆ ತಿಳಿಸಿದರು. ವಾಣಿಜ್ಯ ವಿಭಾಗದ ಉಪನ್ಯಾಸಕಿ ಶ್ರೀಮತಿ ಸುಮಾ ವಂದಿಸಿದರು.
